News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಂತಾರಾಷ್ಟ್ರೀಯ ಮಹಿಳಾ ದಿನ: ನಾರಿಶಕ್ತಿಗೆ ನಮಿಸಿದ ಮೋದಿ

ನವದೆಹಲಿ: ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ. ಲಿಂಗ ಸಮಾನ ಜಗತ್ತನ್ನು ರೂಪಿಸಲು, ಮಹಿಳೆಯರ ಸಾಧನೆಗಳನ್ನು ಮತ್ತು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಅವರ ಹೆಚ್ಚುತ್ತಿರುವ ಭಾಗಿಧಾರಿಯನ್ನು ಆಚರಿಸಲು ಪ್ರತಿ ವರ್ಷ ಮಾರ್ಚ್ 8 ರಂದು ಈ ದಿನವನ್ನು ಆಚರಿಸಲಾಗುತ್ತದೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ನಾರಿ ಶಕ್ತಿಯ ಸಾಧನೆಗಳಿಗೆ ಗೌರವ ಸಲ್ಲಿಸಿದ್ದಾರೆ.

ಟ್ವೀಟ್‌ ಮಾಡಿರುವ ಮೋದಿ, ನವ ಭಾರತಕ್ಕಾಗಿ ನಾರಿ ಶಕ್ತಿಯ ಮಹತ್ವದ್ದಾಗಿದೆ ಮತ್ತು ದೇಶವು ತನ್ನ ಪ್ರಗತಿಯಲ್ಲಿ ಮಹಿಳೆಯರ ಪಾತ್ರವನ್ನು ಬಹಳವಾಗಿ ಗೌರವಿಸುತ್ತದೆ. ಮಹಿಳಾ ಸಬಲೀಕರಣಕ್ಕೆ ಸರಕಾರ ನಿರಂತರವಾಗಿ ಶ್ರಮಿಸಲಿದೆ ಎಂದಿದ್ದಾರೆ.

ಈ ದಿನವು ಮಹಿಳೆಯರ ಸಾಂಸ್ಕೃತಿಕ, ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸಾಧನೆಗಳನ್ನು ಆಚರಿಸುತ್ತದೆ. ಇದು ಜೀವನದ ಪ್ರತಿಯೊಂದು ಹಂತದಲ್ಲೂ ಮಹಿಳೆಯರು ನಿರ್ವಹಿಸುವ ಅಸಾಧಾರಣ ಪಾತ್ರಗಳನ್ನು ಎತ್ತಿ ತೋರಿಸುತ್ತದೆ ಮತ್ತು ಸಾಮಾನ್ಯ ಮಹಿಳೆಯರ ಧೈರ್ಯ ಮತ್ತು  ಕಾರ್ಯಗಳನ್ನು ಆಚರಿಸುತ್ತದೆ ಎಂದಿದ್ದಾರೆ.

ಅಲ್ಲದೇ ಮಹಿಳಾ ಸಾಧಕರ ಬಗೆಗಿನ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top