ಅಹ್ಮದಾಬಾದ್: ಅನುಮತಿ ನಿರಾಕರಿಸಲಾಗಿದ್ದರೂ ‘ಏಕ್ತಾ ಯಾತ್ರೆ’ ನಡೆಸಲು ಮುಂದಾದ ಪಟೇಲ್ ಸಮುದಾಯದ ಮೀಸಲಾತಿ ಹೋರಾಟದ ರುವಾರಿ ಹಾರ್ದಿಕ್ ಪಟೇಲ್ ಮತ್ತು ಆತನ ಬೆಂಬಲಿಗರನ್ನು ಶನಿವಾರ ಬಂಧನಕ್ಕೊಳಪಡಿಸಲಾಗಿದೆ.
ಈತನ ಪ್ರತಿಭಟನಾ ಸಮಾವೇಶಕ್ಕೆ ಗುಜರಾತ್ ಸರ್ಕಾರ ಅನುಮತಿಯನ್ನು ನಿರಾಕರಿಸಿದೆ. ಆದರೂ ಈತ ಪ್ರತಿಭಟನೆಗೆ ಮುಂದಾದ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಬಂಧಿಸಿಲಾಗಿದೆ. ಈತನ ೨೫ ಬೆಂಬಲಿಗರನ್ನೂ ಕಸ್ಟಡಿಯಲ್ಲಿ ಇಡಲಾಗಿದೆ.
ಈ ಹಿಂದೆಯೂ ಎರಡು ಬಾರಿ ಈತನ ಪ್ರತಿಭಟನಾ ಸಮಾವೇಶಕ್ಕೆ ಅನುಮತಿಯನ್ನು ನಿರಾಕರಿಸಲಾಗಿತ್ತು, ಈ ಬಾರಿ ಪ್ರತಿಭಟನೆ ನಡೆಸಿಯೇ ಸಿದ್ಧ ಎಂದು ಈತ ಹೊರಟಿದ್ದ ಎನ್ನಲಾಗಿದೆ.
ಪ್ರಬಲ ಪಟೇಲ್ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಮತ್ತು ಮೀಸಲಾತಿಯನ್ನು ನೀಡಬೇಕು ಎಂದು ಒತ್ತಾಯಿಸಿ ಹಾರ್ದಿಕ್ ಪಟೇಲ್ ನೇತೃತ್ವದಲ್ಲಿ ಹಲವಾರು ದಿನಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.