News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬೆಂಗಳೂರು ದಕ್ಷಿಣದಲ್ಲಿ 100ನೇ ಜನೌಷಧಿ ಕೇಂದ್ರ: ಮೋದಿ ಶ್ಲಾಘನೆ

ನವದೆಹಲಿ: ಬೆಂಗಳೂರು ದಕ್ಷಿಣದಲ್ಲಿ 100 ನೇ ಜನೌಷಧಿ ಕೇಂದ್ರ, ನಮೋ ಉಚಿತ ಡಯಾಲಿಸಿಸ್ ಕೇಂದ್ರ ಮತ್ತು ನಾಲ್ಕು ಮೊಬೈಲ್ ಆರೋಗ್ಯ ಚಿಕಿತ್ಸಾಲಯಗಳು ಕಾರ್ಯಾರಂಭ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್‌ ಮಾಂಡವೀಯಾ ಅವರು ಕೇಂದ್ರಗಳಿಗೆ ಚಾಲನೆ ನೀಡಿದ್ದಾರೆ.

ನಂತರ ಮಾತನಾಡಿದ ಮಾಂಡವೀಯ ಅವರು, ಎಲ್ಲಾ ನಾಗರಿಕರಿಗೆ ಅಗ್ಗದ ಮತ್ತು ಉತ್ತಮ ಗುಣಮಟ್ಟದ ಔಷಧಿಗಳನ್ನು ಒದಗಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ದೇಶಾದ್ಯಂತ ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಿ, ಇದು ಬೆಂಗಳೂರಿಗೆ ಗಮನಾರ್ಹ ಸಾಧನೆಯಾಗಿದೆ ಎಂದು ಬಣ್ಣಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top