News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಹಿಳಾ ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ ಅವರು ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿಅವರು  ಮಾತನಾಡಿದರು.

“ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪುರುಷರನ್ನೊಳಗೊಳ್ಳಬೇಕು. ಪುರುಷ  ತಾಯಿ, ಮಕ್ಕಳು, ಪತ್ನಿಯಿಂದ ಸದಾ ಸೇವೆ ಪಡೆಯುತ್ತಾನೆ. ಮಹಿಳೆಗೆ ತೊಂದರೆಯಾದರೆ ಅದು ಗಂಡು ಮಕ್ಕಳಿಂದ, ಹೀಗಾಗಿ ಗಂಡು ಮಕ್ಕಳಿಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು” ಎಂದರು.

“ನಮ್ಮದು ಪುರುಷ ಪ್ರಧಾನ ಸಮಾಜ ಆದರೆ, ಮೊದಲಿನಿಂದಲೂ ನೋಡಿದರೆ, ಮಹಿಳೆ ಸಾಕಷ್ಟು ಸಾಧನೆ ಮಾಡಿದ್ದಾಳೆ. ನಮ್ಮ ಪುರಾಣಗಳಲ್ಲಿ ಮಹಿಳೆಯರು ಸಾಕಷ್ಟು  ಮಹತ್ವ ಪಡೆದಿದ್ದಾರೆ. ಸ್ವಾತಂತ್ರ್ಯ. ಹೋರಾಟದಲ್ಲಿ ಕಿತ್ತೂರು ಚೆನ್ನಮ್ಮ ಕಹಳೆ ಊದಿದರು. ಅನೇಕ ಮಹಿಳೆಯರು ಸ್ವಾತಂತ್ರ್ಯ ಹೋರಾಟ ಮಾಡಿದ್ದಾರೆ‌” ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top