News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದಿನಿಂದ 3 ದಿನಗಳ ಕರ್ನಾಟಕ ಭೇಟಿಯಲ್ಲಿ ಚುನಾವಣಾ ಆಯೋಗ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಭಾರತೀಯ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳ ತಂಡ ಇಂದು  ಮೂರು ದಿನಗಳ ಕಾಲ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದು, ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ನಡೆಸುತ್ತಿರುವ ಸಿದ್ಧತೆಗಳ ಬಗ್ಗೆ ಪ್ರತ್ಯಕ್ಷ ಮಾಹಿತಿ ಪಡೆಯಲಿದೆ.

ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ, ಅರುಣ್ ಗೋಯೆಲ್ ಮತ್ತು ಜಿಲ್ಲಾಧಿಕಾರಿಗಳು ತಂಡದ ಭಾಗವಾಗಿರುತ್ತಾರೆ. ಆಗಮಿಸಲಿರುವ ಆಯೋಗವು ಬೆಂಗಳೂರಿನಲ್ಲಿ ವಿಧಾನಸಭಾ ಚುನಾವಣೆಗೆ ನಡೆಸುತ್ತಿರುವ ಸಿದ್ಧತೆಗಳ ಕುರಿತು ಚುನಾವಣಾ ಅಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿಗಳ ಸಭೆ ನಡೆಸಲಿದೆ.  ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ಅವರ ಸಲಹೆಗಳನ್ನು ಪಡೆಯಲಿದೆ.

ಇಂದು ಸಂಜೆ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಅಧಿಕಾರಿಗಳು ಅಂತರ್ಗತ ಪ್ರಜಾಪ್ರಭುತ್ವದ ಕುರಿತು ಅಂತರರಾಷ್ಟ್ರೀಯ ಸೆಮಿನಾರ್‌ನಲ್ಲಿ ಭಾಗವಹಿಸಲಿದ್ದಾರೆ. ವಿವಿಧ ದೇಶಗಳ ಮುಖ್ಯ ಚುನಾವಣಾ ಆಯುಕ್ತರು ಈ ಸೆಮಿನಾರ್‌ನಲ್ಲಿ ನೇರವಾಗಿ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ.

ನಾಳೆ ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯೋಗದ ಇತರ ಸದಸ್ಯರು ಚುನಾವಣಾ ಪೂರ್ವ ಸಿದ್ಧತೆಗಳ ಕುರಿತು 34 ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅಲ್ಲದೇ ನಗರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನಲ್ಲಿ ಚುನಾವಣಾ ಮಹತ್ವದ ವಸ್ತುಪ್ರದರ್ಶನ, ಮತದಾರರ ಜಾಗೃತಿ ಅಭಿಯಾನ ಹಾಗೂ ಹ್ಯಾಕಥಾನ್‌ಗೆ ಚಾಲನೆ ನೀಡಿ ಎಲ್‌ಇಡಿ ಮಾಧ್ಯಮ ವಾಹನಗಳಿಗೆ ಚಾಲನೆ ನೀಡಲಿದ್ದಾರೆ. ಇದೇ ಸ್ಥಳದಲ್ಲಿ ಚುನಾವಣಾ ರಾಯಭಾರಿಗಳು, ವಿದ್ಯಾರ್ಥಿಗಳು, ದಿವ್ಯಾಂಗ ಮತದಾರರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಮತ್ತು ಸಾರ್ವಜನಿಕ ಪ್ರಭಾವಿಗಳೊಂದಿಗೆ ವಿಶೇಷ ಸಂವಾದ ನಡೆಸಲಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top