ನವದೆಹಲಿ: ಗುಜರಾತ್ನ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುರುವಾರ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ವೀಕ್ಷಿಸಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್ ಪಂದ್ಯದ ಆರಂಭದ ಮೊದಲು, ಉಭಯ ನಾಯಕರು ಗಾಲ್ಫ್ ಕಾರಿನಲ್ಲಿ ಬೃಹತ್ ಕ್ರೀಡಾ ಮೈದಾನವನ್ನು ಸುತ್ತಿದರು, ಈ ವೇಳೆ ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಆಗಮಿಸಿದ ಸಾವಿರಾರು ಪ್ರೇಕ್ಷಕರು ಚಪ್ಪಾಳೆ ತಟ್ಟಿದರು. ಮೋದಿ ಮತ್ತು ಅಲ್ಬನೀಸ್ ತಮ್ಮ ತಂಡದ ನಾಯಕರಾದ ರೋಹಿತ್ ಶರ್ಮಾ ಮತ್ತು ಸ್ಟೀವ್ ಸ್ಮಿತ್ಗೆ ಟೆಸ್ಟ್ ಕ್ಯಾಪ್ಗಳನ್ನು ಹಸ್ತಾಂತರಿಸಿದರು. ಅಲ್ಲದೇ ಎರಡೂ ತಂಡಗಳ ಆಟಗಾರರನ್ನು ಭೇಟಿಯಾದರು ಮತ್ತು ಭಾರತ ಮತ್ತು ಆಸ್ಟ್ರೇಲಿಯಾದ ರಾಷ್ಟ್ರಗೀತೆಗಳಿಗೆ ಜೊತೆಯಾಗಿ ನಿಂತು ಗೌರವಿಸಿದರು.
ನಂತರ ನರೇಂದ್ರ ಮೋದಿ ಸ್ಟೇಡಿಯಂನಲ್ಲಿರುವ ‘ಹಾಲ್ ಆಫ್ ಫೇಮ್ ಮ್ಯೂಸಿಯಂ’ಗೂ ಇಬ್ಬರು ಪ್ರಧಾನಿಗಳು ಭೇಟಿ ನೀಡಿದರು.
ಪ್ರಧಾನಿ ಮೋದಿಯವರ ಆಹ್ವಾನದ ಮೇರೆಗೆ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಭಾರತಕ್ಕೆ ತಮ್ಮ ಮೊದಲ ಭೇಟಿಯಲ್ಲಿದ್ದಾರೆ.
Cricket, a common passion in India and Australia! Glad to be in Ahmedabad with my good friend, PM @AlboMP to witness parts of the India-Australia Test Match. I am sure it will be an exciting game! 🇮🇳 🇦🇺 https://t.co/XvwU0XCbJf pic.twitter.com/JwJecwUkHi
— Narendra Modi (@narendramodi) March 9, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.