News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಬೆಂಗಳೂರು: ಇಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳನ್ನು ನೀಡಲಾಗಿದೆ.

ಈ ಬಾರಿ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸಮವಸ್ತ್ರ ಕಡ್ಡಾಯವಾಗಿ ಧರಿಸಬೇಕು ಎಂಬ ನಿಯಮ ವಿಧಿಸಲಾಗಿದೆ. ಹಿಜಾಬ್ ಧರಿಸಿ ಬಂದರೆ ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಅವಕಾಶ ಇರುವುದಿಲ್ಲ. ಕಳೆದ ವರ್ಷದ ನಿಯಮವೇ ಈ ಬಾರಿಯೂ ಜಾರಿಯಲ್ಲಿರುತ್ತದೆ ಎಂದು ಪಿಯು ಮಂಡಳಿ ತಿಳಿಸಿದೆ.

ಪರೀಕ್ಷೆಗೆ ಹಾಜರಾಗುವ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವಂತಿಲ್ಲ. ಕಳೆದ ವರ್ಷದ ನಿಯಮ ಈ ಬಾರಿಯೂ ಮುಂದುವರಿಯಲಿದ್ದು, ಹಿಜಾಬ್ ಧರಿಸಿ ಬಂದರೆ ಅಂತಹ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ. ಸಮವಸ್ತ್ರ ನಿಯಮ ಕಡ್ಡಾಯವಾಗಿ ಪಾಲಿಸಬೇಕು. ಕಳೆದ ವರ್ಷ ಹಿಜಾಬ್​ಗೆ ಪಟ್ಟು ಹಿಡಿದಿದ್ದ 6 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿರಲಿಲ್ಲ.

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳು ಇಂದಿನಿಂದ ಮಾರ್ಚ್ 29, 2023 ರವರೆಗೆ ನಡೆಯಲಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top