News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾಶ್ಮೀರ ನಿವಾಸಿಗಳಿಗೆ ಪಾಕಿಸ್ಥಾನದಲ್ಲಿ MBBS ಸೀಟು ದಂಧೆ: ಇಡಿ ದಾಳಿ

ಶ್ರೀನಗರ: ಪಾಕಿಸ್ಥಾನದ ವಿವಿಧ ಕಾಲೇಜುಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಸ್ಥಳೀಯರಿಗೆ ಎಂಬಿಬಿಎಸ್ ಸೀಟು ನೀಡುವ ದಂಧೆಗೆ ಸಂಬಂಧಿಸಿದಂತೆ ಕಾಶ್ಮೀರದ ಒಂಬತ್ತು ಸ್ಥಳಗಳಲ್ಲಿ ಇಂದು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಪಾಕಿಸ್ಥಾನದ ವಿವಿಧ ಕಾಲೇಜುಗಳಲ್ಲಿ ಜಮ್ಮು ಮತ್ತು ಕಾಶ್ಮೀರ ನಿವಾಸಿಗಳಿಗೆ ಎಂಬಿಬಿಎಸ್ ಸೀಟುಗಳನ್ನು ನೀಡುವುದಕ್ಕೆ ಸಂಬಂಧಿಸಿದಂತೆ ಶ್ರೀನಗರ ಜಿಲ್ಲೆಯ ಮೂರು ಸೇರಿದಂತೆ  ಹಲವು ಸ್ಥಳಗಳಲ್ಲಿ ಇಡಿ ದಾಳಿಗಳನ್ನು ಪ್ರಾರಂಭಿಸಿದೆ ಎಂದು ಅಧಿಕೃತ ಮೂಲಗಳು ಐಎಎನ್‌ಎಸ್‌ಗೆ ತಿಳಿಸಿವೆ.

ಅನಂತನಾಗ್ ಜಿಲ್ಲೆಯಲ್ಲೂ ಈ ದಾಳಿಗಳು ನಡೆಯುತ್ತಿವೆ ಎಂದು ವರದಿಯಾಗಿದೆ.

ಈ ದಾಳಿಗಳನ್ನು ನಡೆಸಲು ಸ್ಥಳೀಯ ಪೊಲೀಸರು ಮತ್ತು ಸಿಆರ್‌ಪಿಎಫ್ ಇಡಿ ಅಧಿಕಾರಿಗಳಿಗೆ ಸಹಾಯ ಮಾಡುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top