News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕರ್ನಾಟಕದಲ್ಲಿ ಚುನಾವಣಾ ಸಿದ್ಧತೆ ಪರಿಶೀಲಿಸಿದ ಚುನಾವಣಾ ಆಯೋಗ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರು ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ನಿನ್ನೆ ಪರಿಶೀಲಿಸಿದರು.

ಬೆಂಗಳೂರಿನಲ್ಲಿ ನಡೆದ ಸರಣಿ ಸಂವಾದದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮಾಡಲಾಗುತ್ತಿರುವ ವಿವಿಧ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದರು.

ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಸಲಹೆಗಳನ್ನು ತಂಡ ಪಡೆದಿದೆ ಎಂದು ಮೂಲಗಳು ತಿಳಿಸಿವೆ.

ಆಯೋಗವು ರಾಜ್ಯ ಮುಖ್ಯ ಚುನಾವಣಾ ಕಚೇರಿ ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಿದೆ.

ವರದಿಗಳ ಪ್ರಕಾರ,  ಆಯೋಗವು ಮತದಾರರ ಪಟ್ಟಿಯ ನವೀಕರಣ, ಮತಗಟ್ಟೆಗಳಲ್ಲಿ ಸಿದ್ಧತೆಗಳು ಮತ್ತು ಚುನಾವಣಾ ದಿನಾಂಕಗಳನ್ನು ಘೋಷಿಸಿದ ನಂತರ ಚುನಾವಣಾ ನೀತಿ ಸಂಹಿತೆ ಜಾರಿ ಕುರಿತು ಮಾಹಿತಿಯನ್ನು ಕೇಳಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top