News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಉದ್ಯೋಗಕ್ಕಾಗಿ ಭೂಮಿ ಹಗರಣ: ತೇಜಸ್ವಿ ಯಾದವ್‌ ದೆಹಲಿ ನಿವಾಸದ ಮೇಲೆ ಇಡಿ ದಾಳಿ

ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ, ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಇಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ದೆಹಲಿ ನಿವಾಸದ ಮೇಲೆ ದಾಳಿ ನಡೆಸಿದೆ. ಸಿಬಿಐ ಇತ್ತೀಚೆಗೆ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಮಾಜಿ ರೈಲ್ವೇ ಸಚಿವ ಲಾಲು ಪ್ರಸಾದ್ ಅವರನ್ನು ಈ ಪ್ರಕರಣದಲ್ಲಿ ವಿಚಾರಣೆಗೊಳಪಡಿಸಿತ್ತು.

ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಸುಮಾರು 15 ಸ್ಥಳಗಳ ಮೇಲೆ ಇಡಿ ಈಗಾಗಲೇ ದಾಳಿ ನಡೆಸಿದೆ.

ಲಾಲೂ ಪ್ರಸಾದ್‌ ಅವರು ರೈಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ ಅವರ ಕುಟುಂಬವು ಜನರಿಂದ ಭೂಮಿಯನ್ನು ಪಡೆದುಕೊಂಡು ಅವರಿಗೆ ರೈಲ್ವೆಯಲ್ಲಿ ಉದ್ಯೋಗವನ್ನು ನೀಡಿದೆ ಎಂಬ ಆರೋಪದ ಮೇರೆಗೆ ಈ ತನಿಖೆಗಳು ನಡೆಯುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಎಫ್‌ಐಆರ್ ಆಧಾರದ ಮೇಲೆ ಇಡಿ ಕ್ರಮ ಕೈಗೊಳ್ಳುತ್ತಿದೆ.

ಸಿಬಿಐ  ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಅವರ ಪತ್ನಿ ರಾಬ್ರಿ ದೇವಿ, ಅವರ ಇಬ್ಬರು ಪುತ್ರಿಯರು ಮತ್ತು ಇತರ 15 ಜನರ ವಿರುದ್ಧ ಪ್ರಕರಣ ದಾಖಲಿಸಿದೆ. “2004-2009ರ ಅವಧಿಯಲ್ಲಿ ಯಾದವ್ ಅವರು ರೈಲ್ವೆಯ ವಿವಿಧ ವಲಯಗಳಲ್ಲಿ ಗ್ರೂಪ್ `ಡಿ’ ಪೋಸ್ಟ್‌ನಲ್ಲಿ  ನೇಮಕಾತಿಯ ಬದಲಿಗೆ ತಮ್ಮ ಕುಟುಂಬದ ಸದಸ್ಯರ ಹೆಸರಿಗೆ ಭೂ ಆಸ್ತಿಯನ್ನು ವರ್ಗಾಯಿಸುವ ರೂಪದಲ್ಲಿ ಹಣದ ಅನುಕೂಲಗಳನ್ನು ಪಡೆದಿದ್ದಾರೆ” ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top