ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಇಂದು ಘೋಷಣೆ ಮಾಡಿದ್ದಾರೆ.
ನನ್ನ ಹಿತೈಷಿಗಳು ಮತ್ತು ಬೆಂಬಲಿಗರೊಂದಿಗೆ ಸಮಾಲೋಚಿಸಿದ ನಂತರ ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ. ಕೇಂದ್ರದ ನರೇಂದ್ರ ಮೋದಿ ಸರ್ಕಾರಕ್ಕೆ ನನ್ನ ಸಂಪೂರ್ಣ ಬೆಂಬಲವನ್ನು ನೀಡುತ್ತೇನೆ ಎಂದು ಸುಮಲತಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯ ಮಾಡಲು ಬಿಜೆಪಿ ಸಹಾಯ ಮಾಡಿದೆ. ಮಂಡ್ಯ ರಾಜಕಾರಣವನ್ನು ಶುದ್ಧೀಕರಣ ಮಾಡುವ ಸಲುವಾಗಿ ಬಿಜೆಪಿಗೆ ಬೆಂಬಲ ನೀಡಿರುವುದಾಗಿ ಅವರು ತಿಳಿಸಿದ್ದಾರೆ.
ಅಲ್ಲದೆ ಕುಟುಂಬ ರಾಜಕಾರಣ ಮಾಡುವುದಿಲ್ಲ, ನಾನು ರಾಜಕಾರಣದಲ್ಲಿ ಇರುವವರಿಗೆ ನನ್ನ ಮಗ ರಾಜಕೀಯಕ್ಕೆ ಬರುವುದಿಲ್ಲ ಎಂದಿದ್ದಾರೆ.
“ಸ್ವತಂತ್ರ ಸಂಸದೆಯಾಗಿ ನಾಲ್ಕು ವರ್ಷಗಳಿಂದ ಹಲವಾರು ಸವಾಲುಗಳನ್ನು ಎದುರಿಸಿದ್ದೇನೆ. ವಿಶೇಷವಾಗಿ ಸಾರ್ವಜನಿಕ ಸಭೆಗಳನ್ನು ನಡೆಸುವಲ್ಲಿ ಅಡೆತಡೆಗಳನ್ನು ಎದುರಿಸಿದ್ದೇನೆ, ಆಗ ನನಗೆ ಬೆಂಬಲದ ಅಗತ್ಯವಿದೆ ಎಂದು ಅರಿವಾಯಿತು. ಪ್ರಪಂಚ ಮೆಚ್ಚುವ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನನಗೆ ನಂಬಿಕೆ ಇದೆ” ಎಂದು ಸುಮಲತಾ ಹೇಳಿದ್ದಾರೆ.
Karnataka | Independent MP from Mandya, Sumalatha Ambareesh says "I extend my support to BJP led by PM Narendra Modi. I believe in the leadership of PM Modi."
(file photo) pic.twitter.com/3YI5ObTHBg
— ANI (@ANI) March 10, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.