News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

5 ಮತ್ತು 8ನೇ ತರಗತಿ ಪಬ್ಲಿಕ್‌ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು:  5, 8ನೇ ತರಗತಿಗೆ ನಡೆಸಲು ಉದ್ದೇಶಿಸಲಾಗಿದ್ದ ಪಬ್ಲಿಕ್‌ ಪರೀಕ್ಷೆಯನ್ನು ಹೈಕೋರ್ಟ್‌ ಇಂದು ರದ್ದುಗೊಳಿಸಿದೆ. ಪರೀಕ್ಷೆ ಮಾ.13 ರಿಂದ ಆರಂಭವಾಗಬೇಕಿತ್ತು ಆದರೆ ಹೈಕೋರ್ಟ್‌ ಆದೇಶದಿಂದಾಗಿ ರದ್ದುಗೊಂಡಿದೆ.

ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ.

ಹೈಕೋರ್ಟ್‌ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಈ ಆದೇಶ ಹೊರಡಿಸಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್‌ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಆದೇಶ ಈ ವರ್ಷಕ್ಕೆ ಮಾತ್ರ ಅನ್ವಯ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಮಂಡಳಿ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆಯು ನಿರ್ಧರಿಸಿತ್ತು. ಇದನ್ನು ವಿರೋಧಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘದ (ರುಪ್ಸಾ) ಅಧ್ಯಕ್ಷರು ಮೇಲ್ಮನವಿ ಸಲ್ಲಿಸಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top