News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಾಜಿ ಸಂಸದ ಆರ್. ಧ್ರುವ ನಾರಾಯಣ ನಿಧನ: ಸಿಎಂ ಸೇರಿದಂತೆ ಗಣ್ಯರ ಕಂಬನಿ

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಚಾಮರಾಜನಗರದ ಮಾಜಿ ಸಂಸದ ಆರ್. ಧ್ರುವ ನಾರಾಯಣ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು.

ಏಕಾಏಕಿ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್​ಎಂಎಸ್​​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

1961 ಜುಲೈ 31ರಂದು ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮದಲ್ಲಿ ಜನನಿಸಿದ್ದ ಧ್ರುವನಾರಾಯಣ,  1983ರಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್​ಗೆ ಸೇರ್ಪಡೆಗೊಂಡಿದ್ದರು. 2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಶಾಸಕರಾಗಿ ಆರಿಸಿ ಬಂದಿದ್ದರು. 1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಸೋತಿದ್ದರು. ನಂತರ 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧೃವನಾರಾಯಣ ಆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಹಾಗೆಯೇ 2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬಂದಿದ್ದರು.

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ನಂಜನಗೂಡು ಕಾಂಗ್ರೆಸ್‌ ಅಭ್ಯಥಿಯಾಗಿ ಅವರ ಆಯ್ಕೆ ಬಹುತೇಕ ಖಚಿತವಾಗಿತ್ತು.

ಧ್ರುವ ನಾರಾಯಣ್‌ ಅವರ ನಿಧನಕ್ಕೆ ಮುಖ್ಯಮಂತ್ರಿ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top