News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೆಹಲಿಯಲ್ಲಿ 2 ದಿನಗಳ G20 ಫ್ಲವರ್‌ ಫೆಸ್ಟಿವಲ್‌ಗೆ ಚಾಲನೆ

ನವದೆಹಲಿ: ಇಂದಿನಿಂದ ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ ಎರಡು ದಿನಗಳ G20 ಫ್ಲವರ್‌ ಫೆಸ್ಟಿವಲ್ ಆಯೋಜಿಸಲಾಗಿದೆ.  G20 ಸದಸ್ಯರು ಮತ್ತು ಅತಿಥಿ ದೇಶಗಳ ಉತ್ಸಾಹವನ್ನು ಇಮ್ಮಡಿಗೊಳಿಸುವ ಉದ್ದೇಶದಿಂದ ಇದನ್ನು ಆಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ ಮುನ್ಸಿಪಲ್ ಕೌನ್ಸಿಲ್ ಸೆಂಟ್ರಲ್ ಪಾರ್ಕ್‌ನಲ್ಲಿ ಆಯೋಜಿಸಿರುವ ಫೆಸ್ಟಿವಲ್‌ ಅನ್ನು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಇಂದು ಉದ್ಘಾಟಿಸಿದರು. ಜಪಾನ್, ಸಿಂಗಾಪುರ್, ನೆದರ್ಲ್ಯಾಂಡ್ಸ್ ಸೇರಿದಂತೆ ಜಿ20 ರಾಷ್ಟ್ರಗಳು ಇದರಲ್ಲಿ ಭಾಗವಹಿಸುತ್ತಿವೆ.

ಭಾರತೀಯ ಉಪಖಂಡದ ವೈವಿಧ್ಯತೆಯನ್ನು ಪ್ರದರ್ಶಿಸಲು ವಿವಿಧ ಬಣ್ಣಗಳು ಮತ್ತು ಪ್ರಭೇದಗಳ ಹೂವಿನ ಸಸ್ಯಗಳನ್ನು ವಿವಿಧ ರೂಪಗಳು ಮತ್ತು ಸ್ಥಾಪನೆಗಳಲ್ಲಿ ಪ್ರದರ್ಶಿಸಲಾಗುತ್ತಿದೆ. ಉತ್ಸವದಲ್ಲಿ G20 ಸದಸ್ಯ ರಾಷ್ಟ್ರಗಳು ಮತ್ತು ಅತಿಥಿ ರಾಷ್ಟ್ರಗಳ ಹೂವುಗಳ ಚಿತ್ರಕಲೆ ಮತ್ತು ಛಾಯಾಚಿತ್ರಗಳನ್ನು ಸಹ ಪ್ರದರ್ಶಿಸಲಾಗುತ್ತಿದೆ.

ಬೆಳಿಗ್ಗೆ 10 ರಿಂದ ಸಂಜೆ 7 ರವರೆಗೆ ಫೆಸ್ಟಿವಲ್‌ ನಡೆಯಲಿದ್ದು, ಸಾರ್ವಜನಿಕರಿಗೆ ಪ್ರವೇಶ ಉಚಿತವಾಗಿದೆ. ಕಾರ್ಯಕ್ರಮದ ಸ್ಥಳದಲ್ಲಿ ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಯೋಜಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top