News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸ್ಪೂರ್ತಿದಾಯಕ ಪತ್ರ ಬರೆದ ಪ್ರಧಾನಿಗೆ ಧನ್ಯವಾದ ಅರ್ಪಿಸಿದ ಸಾನಿಯಾ ಮಿರ್ಜಾ

ನವದೆಹಲಿ: ಇತ್ತೀಚಿಗಷ್ಟೇ ವೃತ್ತಿ ಜೀವನದಿಂದ ನಿವೃತ್ತರಾಗಿರುವ ಟೆನ್ನಿಸ್‌ ತಾರೆ ಸಾನಿಯಾ ಮಿರ್ಜಾ ಅವರಿಗೆ  ಪ್ರಧಾನಿ ನರೇಂದ್ರ ಮೋದಿ ಅವರು ಭಾವನಾತ್ಮಕ ಪತ್ರ ಬರೆದಿದ್ದಾರೆ. ಈ ಪತ್ರವನ್ನು ಇಂದು ಸಾನಿಯಾ ಮಿರ್ಜಾ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮೋದಿಯವರ ವಿನಂಬ್ರ ಮತ್ತು ಸ್ಫೂರ್ತಿದಾಯಕ ಪದಗಳಿಗಾಗಿ ಅವರಿಗೆ ಧನ್ಯವಾದ. ಭಾರತವನ್ನು ಹೆಮ್ಮೆ ಪಡುವಂತೆ ಮಾಡುವ ಕಾರ್ಯವನ್ನು ನಾನು ಮುಂದುವರಿಸುತ್ತೇನೆ ಎಂದಿದ್ದಾರೆ.

ಫೆಬ್ರವರಿಯಲ್ಲಿ ನಡೆದ WTA ದುಬೈ ಡ್ಯೂಟಿ-ಫ್ರೀ ಚಾಂಪಿಯನ್‌ಶಿಪ್‌ನಲ್ಲಿ ಮಿರ್ಜಾ ತನ್ನ ಕೊನೆಯ  ಪಂದ್ಯವನ್ನು ಆಡಿದ್ದಾರೆ.

ಸಾನಿಯಾ ಮಿರ್ಜಾ ಭಾರತದ ನಂಬರ್‌ .1 ವೃತ್ತಿಪರ ಟೆನಿಸ್ ಆಟಗಾರ್ತಿಯಾಗಿ ಗುರುತಿಸಿಕೊಂಡರವು.  ಡಬಲ್ಸ್‌ನಲ್ಲಿ ವಿಶ್ವ ನಂ. 1 ಆಗಿದ್ದವರು. ಮೂರು ಮಹಿಳಾ ಡಬಲ್ಸ್ ಮತ್ತು ಮೂರು ಮಿಶ್ರ ಡಬಲ್ಸ್‌ನಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದಾರೆ. 2003 ರಿಂದ 2013 ರಲ್ಲಿ ಸಿಂಗಲ್ಸ್‌ನಿಂದ ನಿವೃತ್ತಿಯಾಗುವವರೆಗೆ ಆಕೆ ಮಹಿಳಾ ಟೆನಿಸ್ ಅಸೋಸಿಯೇಷನ್‌ನಿಂದ ಸಿಂಗಲ್ಸ್‌ನಲ್ಲಿ  ನಂ. 1 ಭಾರತೀಯ ಆಟಗಾರ್ತಿ ಶ್ರೇಯಾಂಕವನ್ನು ಹೊಂದಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top