News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದಿನಿಂದ ಬಜೆಟ್‌ ಅಧಿವೇಶನದ 2ನೇ ಭಾಗ ಆರಂಭ

ನವದೆಹಲಿ: ಬಜೆಟ್ ಅಧಿವೇಶನದ ಎರಡನೇ ಭಾಗ ಇಂದಿನಿಂದ ಪ್ರಾರಂಭವಾಗುತ್ತಿದೆ. ಅಧಿವೇಶನದ ಎರಡನೇ ಹಂತದಲ್ಲಿ ಒಟ್ಟು 17 ಸಿಟ್ಟಿಂಗ್‌ಗಳು ನಡೆಯಲಿದ್ದು, ಮುಂದಿನ ತಿಂಗಳು 6ರವರೆಗೆ ಅಧಿವೇಶನ ಇರಲಿದೆ.

ಇಲಾಖೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಗಳು ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಅನುದಾನದ ಬೇಡಿಕೆಗಳನ್ನು ಪರಿಶೀಲಿಸಿದ ಒಂದು ತಿಂಗಳ ಅವಧಿಯ ನಂತರ ಬಜೆಟ್ ಅಧಿವೇಶನವು ಪುನರಾರಂಭಗೊಳ್ಳುತ್ತಿದೆ.

ಈ ಅವಧಿಯಲ್ಲಿ ಹಣಕಾಸು ಮಸೂದೆಯನ್ನು ಅಂಗೀಕರಿಸುವುದು ತನ್ನ ಆದ್ಯತೆಯಾಗಿದೆ ಎಂದು ಸರ್ಕಾರವು ಪ್ರತಿಪಾದಿಸಿದೆ.

ಇನ್ನೊಂದೆಡೆ ಬಿಜೆಪಿಯ ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ಕೇಂದ್ರೀಯ ಸಂಸ್ಥೆಗಳ ಕ್ರಮ ಮತ್ತು ಅದಾನಿ ವಿರುದ್ಧದ ಆರೋಪಗಳಂತಹ ವಿಷಯಗಳನ್ನು ಪ್ರಸ್ತಾಪಿಸಲು ಪ್ರತಿಪಕ್ಷಗಳು ತಂತ್ರಗಾರಿಕೆ ರೂಪಿಸಿವೆ.

ಅದಾನಿ-ಹಿಂಡೇನ್‌ಬರ್ಗ್ ವಿಷಯದ ಬಗ್ಗೆ ಸರ್ಕಾರದಿಂದ ಉತ್ತರಕ್ಕಾಗಿ ತಮ್ಮ ಪಕ್ಷವು ಒತ್ತಾಯಿಸುವುದನ್ನು ಮುಂದುವರಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಕೆ ಸುರೇಶ್ ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top