ನವದೆಹಲಿ: ಚಿತ್ರನಿರ್ಮಾಪಕ ಎಸ್‌ಎಸ್ ರಾಜಮೌಳಿ ಅವರ ಬ್ಲಾಕ್‌ಬಸ್ಟರ್ “ಆರ್‌ಆರ್‌ಆರ್” ಚಿತ್ರದ ನಾಟು ನಾಟು ಹಾಡು ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್ ಗೆದ್ದುಕೊಂಡಿರುವುದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ನಾಟು ನಾಟು ಹಾಡಿನ ಜನಪ್ರಿಯತೆ ಜಾಗತಿಕವಾಗಿದೆ ಎಂದಿರುವ ಮೋದಿ, ಆಸ್ಕರ್ ಪ್ರಶಸ್ತಿಯನ್ನು ಅಸಾಧಾರಣ ಎಂದು ಬಣ್ಣಿಸಿದ್ದಾರೆ. ಈ ಹಾಡು ಮುಂದಿನ ವರ್ಷಗಳಲ್ಲೂ ನೆನಪಿನಲ್ಲಿ ಉಳಿಯುವ ಹಾಡು ಎಂದು ಹೇಳಿದ್ದಾರೆ.
“ಭಾರತವು ಉತ್ಸುಕವಾಗಿದೆ ಮತ್ತು ಹೆಮ್ಮೆಪಡುತ್ತಿದೆ” ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
“RRR” (ರೈಸ್ ರೋರ್ ರಿವೋಲ್ಟ್) ಸ್ವಾತಂತ್ರ್ಯ ಪೂರ್ವದ ಕಾಲ್ಪನಿಕ ಕಥೆಯಾಗಿದೆ ಮತ್ತು 1920 ರ ದಶಕದಲ್ಲಿ ಇಬ್ಬರು ನೈಜ-ಜೀವನದ ಭಾರತೀಯ ಕ್ರಾಂತಿಕಾರಿಗಳಾದ ಅಲ್ಲೂರಿ ಸೀತಾರಾಮ ರಾಜು (ರಾಮ್ ಚರಣ್) ಮತ್ತು ಕೊಮರಂ ಭೀಮ್ (ಜೂನಿಯರ್ ಎನ್ಟಿಆರ್) ಅವರಿಂದ ಪ್ರೇರಿತಗೊಂಡ ಕಥೆಯಾಗಿದೆ
Exceptional!
The popularity of ‘Naatu Naatu’ is global. It will be a song that will be remembered for years to come. Congratulations to @mmkeeravaani, @boselyricist and the entire team for this prestigious honour.
India is elated and proud. #Oscars https://t.co/cANG5wHROt
— Narendra Modi (@narendramodi) March 13, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.