News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಎಲ್ಲಾ ಜಿಲ್ಲೆಗಳಲ್ಲಿ ಇಎಸ್‌ಐ ಯೋಜನೆ ಜಾರಿಗೆ ತರಲಿದೆ ಕೇಂದ್ರ

ನವದೆಹಲಿ: ಉದ್ಯೋಗಿಗಳ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ದೇಶದ ಎಲ್ಲಾ ಜಿಲ್ಲೆಗಳಲ್ಲಿ ಇಎಸ್‌ಐ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವ ರಾಮೇಶ್ವರ್ ತೇಲಿ ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಮಾರ್ಚ್ 1 ರಿಂದ ಲಕ್ಷದ್ವೀಪವನ್ನು ಹೊರತುಪಡಿಸಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಎಸ್‌ಐ ಯೋಜನೆಯನ್ನು ಅಧಿಸೂಚಿಸಲಾಗಿದೆ ಎಂದು ಹೇಳಿದರು.

ಪ್ರ‌ಸ್ತುತ ದೇಶದ ಒಟ್ಟು 744 ಜಿಲ್ಲೆಗಳ ಪೈಕಿ ಇಎಸ್‌ಐ ಯೋಜನೆಯನ್ನು 609 ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ. ಇದು ಯೋಜನೆಯಡಿಯಲ್ಲಿ 483 ಸಂಪೂರ್ಣ ವ್ಯಾಪ್ತಿಯ ಜಿಲ್ಲೆಗಳನ್ನು ಮತ್ತು 128 ಭಾಗಶಃ ವ್ಯಾಪ್ತಿಯ ಜಿಲ್ಲೆಗಳನ್ನು ಒಳಗೊಂಡಿದೆ.

ESIC ತನ್ನ ಆಸ್ಪತ್ರೆಗಳು ಮತ್ತು ಔಷಧಾಲಯಗಳ ಮೂಲಕ ಫಲಾನುಭವಿಗಳಿಗೆ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸುತ್ತದೆ. ಇಎಸ್‌ಐ ಆಸ್ಪತ್ರೆಯಲ್ಲಿ ನಿಗದಿತ ಚಿಕಿತ್ಸೆ ಲಭ್ಯವಾಗದಿದ್ದಲ್ಲಿ, ಇಎಸ್‌ಐ ಫಲಾನುಭವಿಗಳಿಗೆ ಇಎಸ್‌ಐ ಎಂಪನೆಲ್‌ನಲ್ಲಿರುವ ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳ ಮೂಲಕ ನಗದು ರಹಿತ ರೀತಿಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಚಿಕಿತ್ಸೆಯನ್ನು ಪಡೆಯಲು ಫಲಾನುಭವಿಗಳು ನಿಗದಿತ ರೆಫರಲ್ ವಿಧಾನವನ್ನು ಅನುಸರಿಸಬೇಕಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top