ನವದೆಹಲಿ: ಕೇಂದ್ರ ಸರ್ಕಾರ ಯುವಜನರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ವಾರ್ಷಿಕ 90 ಸಾವಿರ ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
ಅವರು ಭಾರತದ G20 ಪ್ರೆಸಿಡೆನ್ಸಿಯ ಆಶ್ರಯದಲ್ಲಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅರ್ಬನ್ ಅಫೇರ್ಸ್ ಆಯೋಜಿಸಿದ್ದ ರಾಷ್ಟ್ರೀಯ ಯುವ ಸಮಾವೇಶ – 2023 ಅನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭ ಅವರು ಈ ಮಾಹಿತಿ ನೀಡಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ದೇಶದ ಯುವಕರು ಪ್ರೇರೇಪಿಸುತ್ತಿರುವ ಉದ್ಯಮಶೀಲ ಸಂಸ್ಕೃತಿಯಿಂದಾಗಿ ದೇಶದಲ್ಲಿ ಸ್ಟಾರ್ಟ್‌ಅಪ್‌ಗಳ ಪರ್ವ ಆರಂಭವಾಗಿದೆ ಎಂದರು.
ಹವಾಮಾನ ಬದಲಾವಣೆ, ಕೆಲಸದ ಭವಿಷ್ಯ ಮತ್ತು ಪ್ರಜಾಪ್ರಭುತ್ವದಲ್ಲಿ ಯುವಕರಂತಹ ವಿಷಯಗಳ ಬಗ್ಗೆ ತಮ್ಮ ಕಾಳಜಿಯನ್ನು ವರ್ಧಿಸಲು ಯುವಜನರಿಗೆ ವೇದಿಕೆಯನ್ನು ಒದಗಿಸಿದ್ದಕ್ಕಾಗಿ ಪುರಿ ಅವರು ರಾಷ್ಟ್ರೀಯ ಯುವ ಸಮಾವೇಶವನ್ನು ಶ್ಲಾಘಿಸಿದರು.
ಯುವಜನರ ಪ್ರಭಾವದಿಂದಾಗಿ 2047ರ ವೇಳೆಗೆ ಭಾರತ ಎಲ್ಲ ರೀತಿಯಲ್ಲೂ ವಿಶ್ವಗುರುವಾಗಲಿದೆ ಎಂಬ ವಿಶ್ವಾಸವಿದೆ ಎಂದು ಸಚಿವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.