ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಸತ್ತಿನಲ್ಲಿ ಹಿರಿಯ ಸಚಿವರೊಂದಿಗೆ ಸಭೆ ನಡೆಸಿದರು. ನಿರ್ಣಾಯಕ ಸಭೆಯಲ್ಲಿ ಪ್ರಹ್ಲಾದ್ ಜೋಶಿ, ಪಿಯೂಷ್ ಗೋಯಲ್, ನರೇಂದ್ರ ಸಿಂಗ್ ತೋಮರ್, ಕಿರಣ್ ರಿಜಿಜು, ಅನುರಾಗ್ ಠಾಕೂರ್ ಮತ್ತು ನಿತಿನ್ ಗಡ್ಕರಿ ಭಾಗವಹಿಸಿದ್ದಾರೆ.
ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತ ನಿನ್ನೆ ಆರಂಭಗೊಂಡಿದ್ದು, ಲಂಡನ್ನಲ್ಲಿ ರಾಹುಲ್ ಗಾಂಧಿಯವರ ಹೇಳಿಕೆಗಳ ಬಗ್ಗೆ ಗದ್ದಲವುಂಟಾಗುತ್ತಿರುವ ನಡುವೆ ಈ ಸಭೆ ನಡೆದಿದೆ.
ಬಜೆಟ್ ಅಧಿವೇಶನದ ಎರಡನೇ ಭಾಗಕ್ಕೆ ಮುಂಚಿತವಾಗಿ ಸರ್ಕಾರದ ಕಾರ್ಯತಂತ್ರವನ್ನು ರೂಪಿಸಲು ಪ್ರಧಾನಿ ಮೋದಿ ಸೋಮವಾರ ಉನ್ನತ ಮಂತ್ರಿಗಳೊಂದಿಗೆ ಸಭೆ ನಡೆಸಿದ್ದರು. ಇದೀಗ ಮತ್ತೊಂದು ಅವರು ಹಿರಿಯರೊಂದಿಗೆ ಸಭೆ ನಡೆಸಿದ್ದು ಹಲವು ಕುತೂಹಲಗಳನ್ನು ಮೂಡಿಸಿದೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.