News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸ್ವಾತಂತ್ರ್ಯದ ನಂತರ ದೇಶದ ಒಟ್ಟು ಮೀನು ಉತ್ಪಾದನೆಯಲ್ಲಿ 21 ಪಟ್ಟು ಹೆಚ್ಚಳ

ನವದೆಹಲಿ: ಸ್ವಾತಂತ್ರ್ಯದ ನಂತರ ದೇಶದಲ್ಲಿ ಒಟ್ಟಾರೆ ಮೀನು ಉತ್ಪಾದನೆ 21 ಪಟ್ಟು ಹೆಚ್ಚಾಗಿದೆ ಎಂದು ಸರ್ಕಾರ ಮಂಗಳವಾರ ಹೇಳಿದೆ.

ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪರ್ಷೋತ್ತಮ್ ರೂಪಾಲಾ ಅವರು ,1950-51ರಲ್ಲಿ 7.52 ಲಕ್ಷ ಟನ್‌ಗಳಷ್ಟು ಇದ್ದ ಮೀನು ಉತ್ಪಾದನೆ 2021-22ರಲ್ಲಿ 162.48 ಲಕ್ಷ ಟನ್‌ಗಳಿಗೆ ಸ್ಥಿರವಾದ ಬೆಳವಣಿಗೆಯನ್ನು ದಾಖಲಿಸಿದೆ ಎಂದಿದ್ದಾರೆ.

ಸರ್ಕಾರವು ಪ್ರಸ್ತುತ ಪ್ರಮುಖ ಯೋಜನೆಯಾದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, 2020-21 ರಿಂದ ಎಲ್ಲಾ ರಾಜ್ಯಗಳಲ್ಲಿ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಮೀನುಗಾರಿಕಾ ಕ್ಷೇತ್ರದಲ್ಲಿ ಅಂದಾಜು 20,000 ಕೋಟಿ ರೂಪಾಯಿ ಹೂಡಿಕೆ ಮಾಡಲಾಗುವುದು ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top