News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಾರ್ಚ್ 11 ರವರೆಗೆ ದೇಶದಲ್ಲಿ 2 ಕೋಟಿ 18 ಲಕ್ಷ ಪಕ್ಕಾ ಮನೆಗಳು ಪೂರ್ಣ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ (ಪಿಎಂಎವೈ-ಜಿ) ಅಡಿಯಲ್ಲಿ ಮಾರ್ಚ್ 11 ರವರೆಗೆ 2 ಕೋಟಿ 18 ಲಕ್ಷ ಪಕ್ಕಾ ಮನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು‌ ಈ ಮಾಹಿತಿ ನೀಡಿದ್ದಾರೆ.

ಪಿಎಂಎವೈ-ಜಿ ಯೋಜನೆಯಡಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಒಟ್ಟು 2 ಕೋಟಿ 94 ಪಕ್ಕಾ ಮನೆಗಳ ಪೈಕಿ ಫಲಾನುಭವಿಗಳಿಗೆ ಈಗಾಗಲೇ 2 ಕೋಟಿ 85 ಲಕ್ಷ ಪಕ್ಕಾ ಮನೆಗಳನ್ನು ಮಂಜೂರು ಮಾಡಿವೆ ಎಂದಿದ್ದಾರೆ.

ಮಾರ್ಚ್ 2024 ರೊಳಗೆ ಮೂಲ ಸೌಕರ್ಯಗಳೊಂದಿಗೆ 2 ಕೋಟಿ 95 ಲಕ್ಷ ಪಕ್ಕಾ ಮನೆಗಳನ್ನು ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿತ್ತು ಎಂದು ಅವರು ಸದನಕ್ಕೆ ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top