ನವದೆಹಲಿ: ರಾಷ್ಟ್ರೀಯ ಲಸಿಕೆ ದಿನವಾದ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಲ್ಲಾ ಆರೋಗ್ಯ ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ ಮತ್ತು ಭಾರತವನ್ನು ಆರೋಗ್ಯಕರವಾಗಿಡುವಲ್ಲಿನ ಅವರ ಪ್ರಯತ್ನಗಳಿಗಾಗಿ ಅವರನ್ನು ಶ್ಲಾಘಿಸಿದ್ದಾರೆ. ಅಲ್ಲದೇ ಆರೋಗ್ಯಕರ ದೇಶವನ್ನು ನಿರ್ಮಿಸುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ರಾಷ್ಟ್ರೀಯ ಲಸಿಕಾ ದಿನದಂದು, ಪ್ರತಿ ಮಗುವಿಗೆ ಲಸಿಕೆ ಹಾಕುವುದನ್ನು ಖಚಿತಪಡಿಸಿಕೊಳ್ಳಲು ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರ ಶ್ರಮವನ್ನು ಇಡೀ ರಾಷ್ಟ್ರವು ವಂದಿಸುತ್ತದೆ ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಟ್ವೀಟ್ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮೋದಿ,”ಭಾರತವನ್ನು ಆರೋಗ್ಯವಾಗಿಡಲು ನಮ್ಮ ಎಲ್ಲಾ ಆರೋಗ್ಯ ಕಾರ್ಯಕರ್ತರ ಪ್ರಯತ್ನಗಳಿಗಾಗಿ ಅಭಿನಂದನೆಗಳು. ರಾಷ್ಟ್ರೀಯ ವ್ಯಾಕ್ಸಿನೇಷನ್ ದಿನದಂದು ನಾವು ಜನರಿಗೆ ಲಸಿಕೆ ನೀಡುವಲ್ಲಿ ಭಾರತದ ಮೈಲಿಗಲ್ಲುಗಳನ್ನು ನೆನಪಿಸಿಕೊಳ್ಳುತ್ತೇವೆ ಮತ್ತು ಆರೋಗ್ಯಕರ ಭಾರತವನ್ನು ನಿರ್ಮಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ” ಎಂದಿದ್ದಾರೆ.
Compliments to all our healthcare workers for their efforts towards keeping India healthy.
On National Vaccination Day we also recall India's strides in vaccinating people and reaffirm our commitment to building a healthy India. https://t.co/g2fYiIhojq
— Narendra Modi (@narendramodi) March 16, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.