News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪ್ರಸ್ತುತ ದೇಶದಲ್ಲಿನ ಎಂಬಿಬಿಎಸ್‌ ಸೀಟುಗಳ ಸಂಖ್ಯೆ 1 ಲಕ್ಷಕ್ಕೆ ಏರಿಕೆ

ನವದೆಹಲಿ: ಪ್ರಸ್ತುತ ದೇಶದಲ್ಲಿನ ಎಂಬಿಬಿಎಸ್‌ ಸೀಟುಗಳ ಸಂಖ್ಯೆ ಒಂದು ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಮಾತನಾಡಿ ಸಂಸತ್ತಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ದೇಶದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆ ಈಗ ಒಂದು ಲಕ್ಷದ ಗಡಿ ದಾಟಿದೆ. 2014ರಲ್ಲಿ ಕೇವಲ 51,348 ಎಂಬಿಬಿಎಸ್ ಸೀಟುಗಳಿದ್ದು ಈಗ 1 ಲಕ್ಷದ 1043ಕ್ಕೆ ಏರಿದೆ ಎಂದಿದ್ದಾರೆ.

ಪಿಜಿ ಸೀಟುಗಳ ಸಂಖ್ಯೆ 2014ರಲ್ಲಿ ಇದ್ದ 31,185ರಿಂದ 2023 ರಲ್ಲಿ 65,335 ಸ್ಥಾನಗಳಿಗೆ ಏರಿದೆ ಎಂದಿದ್ದಾರೆ.

ಸರ್ಕಾರದ ಪ್ರಯತ್ನಗಳನ್ನು ಶ್ಲಾಘಿಸುತ್ತಾ ಡಾ ಮಾಂಡವಿಯಾ ಟ್ವೀಟ್ ಮಾಡಿದ್ದು, ದೇಶ ಬದಲಾಗಿದೆ. MBBS ಸೈಟ್‌ಗಳು 1 ಲಕ್ಷಕ್ಕೆ ಏರಿದೆ ಎಂದಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top