News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

11.41 ಕೋಟಿ ಗ್ರಾಮೀಣ ಕುಟುಂಬಗಳು‌ ನಲ್ಲಿ ನೀರು ಸಂಪರ್ಕ ಹೊಂದಿವೆ: ಕೇಂದ್ರ

ನವದೆಹಲಿ: 11.41 ಕೋಟಿ ಗ್ರಾಮೀಣ ಕುಟುಂಬಗಳು ತಮ್ಮ ಮನೆಗಳಲ್ಲಿ ನಲ್ಲಿ ನೀರು ಸರಬರಾಜು ಹೊಂದಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಇಂದು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್‌ ಸಿಂಗ್‌ ಪಟೇಲ್, 2024 ರ ವೇಳೆಗೆ ದೇಶದ ಪ್ರತಿಯೊಂದು ಗ್ರಾಮೀಣ ಮನೆಗಳಿಗೂ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸಲು ಸರ್ಕಾರವು ಜಲ ಜೀವನ್ ಮಿಷನ್ ಅನ್ನು ಜಾರಿಗೆ ತರುತ್ತಿದೆ ಎಂದು ಅವರು ಹೇಳಿದರು.

2019 ರಲ್ಲಿ ಜಲ ಜೀವನ್ ಮಿಷನ್ ಘೋಷಣೆಯ ಸಂದರ್ಭದಲ್ಲಿ ಕೇವಲ 3 ಕೋಟಿ 23 ಲಕ್ಷ ಗ್ರಾಮೀಣ ಕುಟುಂಬಗಳು ಮಾತ್ರ ನಲ್ಲಿ ನೀರಿನ ಸಂಪರ್ಕವನ್ನು ಹೊಂದಿದ್ದವು ಎಂದು ಅವರು ಹೇಳಿದ್ದಾರೆ.

ಮಿಷನ್ ಅಡಿಯಲ್ಲಿ ಎಂಟು ಕೋಟಿಗೂ ಹೆಚ್ಚು ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸಲಾಗಿದೆ. ದೇಶದ ಸುಮಾರು 19 ಕೋಟಿ ಗ್ರಾಮೀಣ ಕುಟುಂಬಗಳಲ್ಲಿ ಶೇಕಡಾ 58 ಕ್ಕೂ ಹೆಚ್ಚು ಕುಟುಂಬಗಳು ತಮ್ಮ ಮನೆಗಳಲ್ಲಿ ನಲ್ಲಿ ನೀರು ಸರಬರಾಜು ಮಾಡುತ್ತಿವೆ ಎಂದು ಸಚಿವರು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top