News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

PLI ಯೋಜನೆಯಡಿ ಆಯ್ದ ಕಂಪನಿಗಳೊಂದಿಗೆ ಕೇಂದ್ರ ಒಪ್ಪಂದ

ನವದೆಹಲಿ: ಉಕ್ಕಿನ ಸಚಿವಾಲಯವು ಇಂದು ನವದೆಹಲಿಯಲ್ಲಿ ವಿಶೇಷ ಉಕ್ಕು ಉತ್ಪಾದನಾ-ಸಂಯೋಜಿತ ಪ್ರೋತ್ಸಾಹ (ಪಿಎಲ್‌ಐ) ಯೋಜನೆಯಡಿ ಆಯ್ದ ಕಂಪನಿಗಳೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಉಕ್ಕು ಉದ್ಯಮದ ಭವಿಷ್ಯಕ್ಕಾಗಿ ಭಾರತವು ಬೆಳವಣಿಗೆಯ ಕೇಂದ್ರಬಿಂದುವಾಗಿದೆ. ಈ ಕ್ಷೇತ್ರದಲ್ಲಿ ಮುಂದಿನ ಎರಡು ದಶಕಗಳಲ್ಲಿ ಭಾರತ ಪ್ರಮುಖ ಪಾತ್ರ ವಹಿಸಲಿದೆ ಎಂದು ಅವರು ಒತ್ತಿ ಹೇಳಿದರು.

ಈ ದಿನವನ್ನು ಉಕ್ಕು ಉದ್ಯಮದ ಇತಿಹಾಸ ಮತ್ತು ಅದರ ಭವಿಷ್ಯದಲ್ಲಿ ಮಹತ್ವದ ದಿನ ಎಂದು ಸಚಿವರು ಬಣ್ಣಿಸಿದರು.

ಈ ಸಂದರ್ಭದಲ್ಲಿ 27 ಕಂಪನಿಗಳೊಂದಿಗೆ ಒಟ್ಟು 57 ಎಂಒಯುಗಳಿಗೆ ಸಹಿ ಹಾಕಲಾಯಿತು. ಉತ್ಪಾದನೆ-ಸಂಯೋಜಿತ ಪ್ರೋತ್ಸಾಹ ಯೋಜನೆಯು ದೇಶೀಯ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಅಸ್ತಿತ್ವದಲ್ಲಿರುವ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಅಥವಾ ವಿಸ್ತರಿಸಲು ಸ್ಥಳೀಯ ಕಂಪನಿಗಳನ್ನು ಉತ್ತೇಜಿಸುವ ಮೂಲಕ ಆಮದು ಬಿಲ್‌ಗಳನ್ನು ಕಡಿತಗೊಳಿಸುವ ಗುರಿಯನ್ನು ಹೊಂದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top