ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಶುಕ್ರವಾರ ಸಂಜೆ ನೇಪಾಳದ ಅಧ್ಯಕ್ಷ ರಾಮ್ ಚಂದ್ರ ಪೌಡೆಲ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಪ್ರಸ್ತುತ ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿಗಳು ಅಧ್ಯಕ್ಷ ಪೌಡೆಲ್ ಅವರಿಗೆ ಕರೆಮಾಡಿ ನೇಪಾಳದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅಭಿನಂದಿಸಿದರು.
ಇಬ್ಬರೂ ನಾಯಕರು ಭಾರತ ಮತ್ತು ನೇಪಾಳ ನಡುವಿನ ಅನನ್ಯ ಮತ್ತು ಬಹುಮುಖಿ ಸಂಬಂಧಗಳನ್ನು ಶ್ಲಾಘಿಸಿದ್ದಾರೆ. ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಮುಂದುವರಿಸಲು ಮತ್ತು ಎರಡು ದೇಶಗಳ ಜನರ ನಡುವಿನ ಸ್ನೇಹದ ಬಲವಾದ ಬಂಧಗಳನ್ನು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದ್ದಾರೆ.
ಅಧ್ಯಕ್ಷ ಪಾಡೆಲ್ ಅವರ ಮಾರ್ಗದರ್ಶನದಲ್ಲಿ ಭಾರತ-ನೇಪಾಳ ದ್ವಿಪಕ್ಷೀಯ ಸಂಬಂಧಗಳು ಇನ್ನೂ ಹೆಚ್ಚಿನ ಎತ್ತರವನ್ನು ತಲುಪಲಿವೆ ಎಂದು ಅಧ್ಯಕ್ಷ ದ್ರೌಪದಿ ಮುರ್ಮು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
President Droupadi Murmu had a telephonic conversation with Rt. Hon. President Ram Chandra Paudel of Nepal. She congratulated him on assuming the office of the President, and discussed ways to further strengthen the unique India-Nepal friendship. 🇮🇳🇳🇵https://t.co/KWwYxlVPIB
— President of India (@rashtrapatibhvn) March 17, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.