News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಲ್ಬುರ್ಗಿಯಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್: ಪ್ರಧಾನಿಗೆ ಸಿಎಂ  ಧನ್ಯವಾದ

ಬೆಂಗಳೂರು: ಕರ್ನಾಟಕದ ಕಲ್ಬುರ್ಗಿಯಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಬವರಾಜ ಬೊಮ್ಮಾಯಿ ಅವರು ಧನ್ಯವಾದಗಳನ್ನು ಅರ್ಪಣೆ ಮಾಡಿದ್ದಾರೆ.

ಟ್ವಿಟ್‌ ಮಾಡಿರುವ ಬೊಮ್ಮಾಯಿ, ಕಲ್ಬುರ್ಗಿಯಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆ ಸ್ವಾಗತಾರ್ಹವಾಗಿದ್ದು, ಇದು ಜವಳಿ ವಲಯವನ್ನು ಉತ್ತೇಜಿಸುವುದರ ಜೊತೆಗೆ ಸ್ಥಳೀಯ ಪೂರಕ ಕೈಗಾರಿಕೆಗಳಿಗೆ ಪ್ರಯೋಜನವಾಗಲಿದೆ. ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ವಿಶೇಷವಾದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಒಟ್ಟು 7 ರಾಜ್ಯಗಳಲ್ಲಿ ಟೆಕ್ಸ್‌ಟೈಲ್‌ ಪಾರ್ಕ್‌ ಸ್ಥಾಪನೆ ಮಾಡುವುದಾಗಿ ಪ್ರಧಾನಿ ಶುಕ್ರವಾರ ಘೋಷಣೆ ಮಾಡಿದ್ದಾರೆ.

ತಮಿಳುನಾಡು, ತೆಲಂಗಾಣ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ PM MITRA (PM Mega Integrated Textile Region and Apparel) ಮೆಗಾ ಜವಳಿ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು ಎಂದಿದ್ದಾರೆ.

ಈ ಪಾರ್ಕ್ 5F (ಫಾರ್ಮ್‌ನಿಂದ ಫೈಬರ್‌ನಿಂದ ಫ್ಯಾಕ್ಟರಿಯಿಂದ ಫ್ಯಾಶನ್‌ನಿಂದ ಫಾರಿನ್) ದೃಷ್ಟಿಗೆ ಅನುಗುಣವಾಗಿ ದೇಶದಲ್ಲಿ ಜವಳಿ ಕ್ಷೇತ್ರವನ್ನು ಉತ್ತೇಜಿಸುತ್ತದೆ ಎಂದು ಅವರು ಹೇಳಿದ್ದಾರೆ

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top