News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

2033ರ ವೇಳೆಗೆ ಜಾಗತಿಕ ಡೈರಿ ವಲಯದಲ್ಲಿ ಭಾರತದ ಪಾಲು ಶೇ.33ಕ್ಕೆ ಏರಿಕೆಯಾಗಲಿದೆ

ನವದೆಹಲಿ: 2033ರ ವೇಳೆಗೆ ಜಾಗತಿಕ ಡೈರಿ ವಲಯದಲ್ಲಿ ಭಾರತದ ಪಾಲು ಶೇ.33ಕ್ಕೆ ಏರಿಕೆಯಾಗಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ.

ಗಾಂಧಿನಗರದಲ್ಲಿ ನಡೆದ 49ನೇ ಡೈರಿ ಇಂಡಸ್ಟ್ರೀಸ್ ಸಮ್ಮೇಳನದ ಸಮಾರೋಪವನ್ನು ಉದ್ದೇಶಿಸಿ ಮಾತನಾಡಿದ ಶಾ, ದೇಶದಾದ್ಯಂತ ಪಂಚಾಯತ್ ಮಟ್ಟದಲ್ಲಿ ಎರಡು ಲಕ್ಷ ಗ್ರಾಮೀಣ ಡೈರಿಗಳನ್ನು ಸ್ಥಾಪಿಸಲು ಸರ್ಕಾರ ಯೋಜಿಸುತ್ತಿದೆ, ಇದು ಭಾರತೀಯ ಡೈರಿ ಕ್ಷೇತ್ರದ ವಾರ್ಷಿಕ ಬೆಳವಣಿಗೆ ದರವನ್ನು ಪ್ರಸ್ತುತ ಶೇ 6.6 ರಿಂದ ಶೇ 13.80ಕ್ಕೆ ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ.

ಗ್ರಾಮೀಣ ಆರ್ಥಿಕ ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣದಲ್ಲಿ ಸಹಕಾರಿ ಹಾಲು ಒಕ್ಕೂಟಗಳ ಪಾತ್ರವನ್ನು ಶ್ಲಾಘಿಸಿದ ಸಚಿವರು, ಭಾರತದಲ್ಲಿ ಸುಮಾರು 9 ಕೋಟಿ ಗ್ರಾಮೀಣ ಕುಟುಂಬಗಳು ತಮ್ಮ ಜೀವನೋಪಾಯಕ್ಕಾಗಿ ಹೈನುಗಾರಿಕೆ ಕ್ಷೇತ್ರವನ್ನು ಅವಲಂಬಿಸಿವೆ ಎಂದರು.

ಡೈರಿ ಉತ್ಪನ್ನಗಳ ಉತ್ತೇಜನಕ್ಕಾಗಿ ಬಹು-ರಾಜ್ಯ ಸಹಕಾರಿಗಳ ಸ್ಥಾಪನೆಯೊಂದಿಗೆ, ಭಾರತದ ಡೈರಿ ರಫ್ತು ಐದು ಪಟ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಶಾ ಭರವಸೆ ವ್ಯಕ್ತಪಡಿಸಿದರು. ಭಾರತದಲ್ಲಿನ ಡೈರಿ ಕ್ಷೇತ್ರವು ಸ್ವಾವಲಂಬಿ ಭಾರತದ ಸಂಕೇತವಾಗಿದೆ ಮತ್ತು ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಹಾಲು ಉತ್ಪಾದಿಸುವ ದೇಶವಾಗಿದೆ ಎಂದು ಸಚಿವರು ಹೇಳಿದರು.

ಮೂರು ದಿನಗಳ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಡೈರಿ ಕೈಗಾರಿಕೋದ್ಯಮಿಗಳು, ಪಶುಪಾಲಕರು, ಸಹಕಾರಿ ಮುಖಂಡರು ಭಾಗವಹಿಸಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top