News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಾಕಿಸ್ಥಾನ: ಇಮ್ರಾನ್‌ ಖಾನ್‌ ವಿರುದ್ಧ ಭಯೋತ್ಪಾದನೆ ಪ್ರಕರಣ ದಾಖಲು

ಇಸ್ಲಾಮಾಬಾದ್: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಪಾಕಿಸ್ತಾನ ಪೊಲೀಸರು ಭಾನುವಾರ ಇಮ್ರಾನ್ ಖಾನ್ ಮತ್ತು 12 ಪಿಟಿಐ ನಾಯಕರ ವಿರುದ್ಧ ಭಯೋತ್ಪಾದನೆ ಪ್ರಕರಣವನ್ನು ದಾಖಲಿಸಿದ್ದಾರೆ.

ಇಮ್ರಾನ್‌ ಮತ್ತು ಬೆಂಬಲಿಗರು ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ, ಭದ್ರತಾ ಸಿಬ್ಬಂದಿಯ ಮೇಲೆ ದಾಳಿ ಮಾಡಿದ್ದಾರೆ ಮತ್ತು ಇಲ್ಲಿನ ನ್ಯಾಯಾಂಗ ಸಂಕೀರ್ಣದ ಹೊರಗೆ ಅಶಾಂತಿ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಭಯೋತ್ಪಾನೆ ಪ್ರಕರಣ ದಾಖಲು ಮಾಡಲಾಗಿದೆ.

ತೋಷಖಾನಾ ಪ್ರಕರಣದ ಬಹು ನಿರೀಕ್ಷಿತ ವಿಚಾರಣೆಗೆ ಹಾಜರಾಗಲು ಖಾನ್ ಲಾಹೋರ್‌ನಿಂದ ಇಸ್ಲಾಮಾಬಾದ್‌ಗೆ ಆಗಮಿಸಿದಾಗ ಶನಿವಾರ ಇಸ್ಲಾಮಾಬಾದ್ ನ್ಯಾಯಾಂಗ ಸಂಕೀರ್ಣದ ಹೊರಗೆ ಘರ್ಷಣೆಗಳು ಭುಗಿಲೆದ್ದವು.

ಶನಿವಾರ ನಡೆದ ಘರ್ಷಣೆಯಲ್ಲಿ ಹಲವಾರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಕಾರ್ಯಕರ್ತರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ 25 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಗಾಯಗೊಂಡರು, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಾಫರ್ ಇಕ್ಬಾಲ್ ಅವರು ಮಾರ್ಚ್ 30 ರವರೆಗೆ ನ್ಯಾಯಾಲಯದ ವಿಚಾರಣೆಯನ್ನು ಮುಂದೂಡಿದರು ಎಂದು ವರದಿಗಳು ತಿಳಿಸಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top