News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದು ವಿಶ್ವ ಗುಬ್ಬಚ್ಚಿ ದಿನ: ಗುಬ್ಬಚಿ ಸಂರಕ್ಷಣೆಗೆ ನೀಡಬೇಕಿದೆ ಒತ್ತು

ನವದೆಹಲಿ: ಇಂದು ವಿಶ್ವ ಗುಬ್ಬಚ್ಚಿ ದಿನ. ಮನೆಯಂಗಣದಲ್ಲಿ ಚೀಂವ್‌ ಚೀಂವ್‌ ಎಂದು ಪಿಸುಗುಟ್ಟುತ್ತಾ ಮನಸ್ಸಿಗೆ ಮುದ ನೀಡುತ್ತಿದ್ದ ಗುಬ್ಬಚ್ಚಿಗಳು ಇಂದು ಕಾಣಸಿಗುವುದೇ ಅಪರೂಪ. ಇಂತಹ ಗುಬ್ಬಚ್ಚಿಗಳನ್ನು ಸಂರಕ್ಷಿಸುವ ಮಹತ್ವದ ಉದ್ದೇಶದೊಂದಿಗೆ ಇಂದು ವಿಶ್ವ ಗುಬ್ಬಚ್ಚಿ ದಿನವನ್ನು ಆಚರಣೆ ಮಾಡಲಾಗುತ್ತಿದೆ.

ಗುಬ್ಬಚ್ಚಿ ಹಾಗೂ ಇನ್ನಿತರ ಪಕ್ಷಿಗಳ ಬಗೆಗೆ ಜನ ಜಾಗೃತಿ ಉಂಟುಮಾಡಿ ಅವುಗಳ ಸಂಕುಲಕ್ಕೆ ಉಂಟಾಗುತ್ತಿರುವ ಭೀತಿಯನ್ನು ತಡೆಗಟ್ಟುವ ಪ್ರಯತ್ನವಾಗಿ ಮಾರ್ಚ್ 20 ದಿನವನ್ನು ವಿಶ್ವ ಗುಬ್ಬಚ್ಚಿಗಳ ದಿನವಾಗಿ ಆಚರಿಸಲಾಗುತ್ತಿದೆ.

ಭಾರತದ ನೇಚರ್ ಫಾರೆವರ್ ಸೊಸೈಟಿಯ ಪ್ರಮುಖ ಆಸಕ್ತಿಯ ಮೇರೆಗೆ ಪ್ರಾರಂಭಗೊಂಡಿರುವ ಈ ಆಚರಣೆಗೆ, ಫ್ರಾನ್ಸಿನ ಇಕೋ-ಸಿಸ್ ಆಕ್ಷನ್ ಫೌಂಡೆಶನ್ ಮತ್ತು ವಿಶ್ವದ ಅನೇಕ ಸಂಸ್ಥೆಗಳು ಸಹಯೋಗ ನೀಡಿವೆ. ಸಂಸ್ಥೆಯ ನಿರ್ಮಾತೃ ಮೊಹಮ್ಮದ್ ದಿಲ್ವಾರ್ ಅವರು 2010ರಲ್ಲಿ ಗುಬ್ಬಚ್ಚಿಗಳ ದಿನವನ್ನು ಜಗತ್ತಿಗೆ ಪರಿಚಯಿಸಿದರು.

ಪ್ರತಿವರ್ಷ ಎನ್‌ಎಫ್‌ಎಸ್‌ಐ ವಿಶ್ವ ಗುಬ್ಬಚ್ಚಿಗಳ ದಿನವನ್ನು ಪ್ರಪಂಚದಾದ್ಯಂತ ಒಟ್ಟು 50 ರಾಷ್ಟ್ರಗಳಲ್ಲಿ ಆಚರಿಸುತ್ತಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top