News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಷ್ಯಾಗೆ ಆಗಮಿಸಿದ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಲು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮೂರು ದಿನಗಳ ಭೇಟಿಗಾಗಿ ಸೋಮವಾರ ಮಾಸ್ಕೋಗೆ ಆಗಮಿಸಿದ್ದಾರೆ. ರಷ್ಯಾ ತನ್ನ ಉಕ್ರೇನ್ ಆಕ್ರಮಣವನ್ನು ಪ್ರಾರಂಭಿಸಿದ ನಂತರ ಚೀನಾದ ಅಧ್ಯಕ್ಷರ ಮೊದಲ ರಷ್ಯಾ ಭೇಟಿ ಇದಾಗಿದೆ.

ಸೋಮವಾರ, ಕ್ಸಿ ಜಿನ್‌ಪಿಂಗ್ ಮತ್ತು ವ್ಲಾಡಿಮಿರ್ ಪುಟಿನ್ ತಮ್ಮ ದೇಶಗಳ ನಡುವಿನ ಸಂಬಂಧದ ಕುರಿತು ತಮ್ಮ ದೃಷ್ಟಿಕೋನಗಳನ್ನು ವಿವರಿಸುವ ವಿಭಿನ್ನ ಲೇಖನಗಳನ್ನು ಪ್ರಕಟಿಸಿದ್ದರು.ಉಕ್ರೇನ್ ಬಿಕ್ಕಟ್ಟನ್ನು ಪರಿಹರಿಸುವ ಚೀನಾದ ಪ್ರಸ್ತಾವನೆಯು ವಿಶ್ವದ ಅಭಿಪ್ರಾಯಗಳಿಗೆ ಅನುಗುಣವಾಗಿದೆ ಎಂದು ಕ್ಸಿ ಹೇಳಿದ್ದಾರೆ.

 ಪುಟಿನ್ ಅವರನ್ನು ಒಳ್ಳೆಯ ಹಳೆಯ ಸ್ನೇಹಿತ ಎಂದು ಕರೆದಿರುವ ಕ್ಸಿ, ತಮ್ಮ ಭೇಟಿಯ ಬಗ್ಗೆ ಹೆಚ್ಚಿನ ನಿರೀಕ್ಷೆಗಳನ್ನು ವ್ಯಕ್ತಪಡಿಸಿದ್ದಾರೆ.

ಉಕ್ರೇನ್‌ನಲ್ಲಿ ಯುದ್ಧಾಪರಾಧ ಎಸಗಿದ್ದಾರೆ ಎಂದು ಪುಟಿನ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌ ಅರೆಸ್ಟ್‌ ವಾರೆಂಟ್‌ ಹೊರಡಿಸಿದ  ಕೆಲವೇ ದಿನಗಳಲ್ಲಿ ಕ್ಸಿ ಅಲ್ಲಿಗೆ ಭೇಟಿ ನೀಡಿರುವುದು ಹಲವು ಕುತೂಹಲ ಮೂಡಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top