News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 2nd November 2024


×
Home About Us Advertise With s Contact Us

ಹಲವು ಖಲಿಸ್ತಾನಿ ಬೆಂಬಲಿಗರ ಟ್ವಿಟರ್‌ ಖಾತೆ ನಿಷೇಧಿಸಿದ ಕೇಂದ್ರ

ನವದೆಹಲಿ: ಅಮೃತ್‌ ಪಾಲ್‌ ಸಿಂಗ್‌ ಬಂಧನಕ್ಕೆ ಪಂಜಾಬಿನಲ್ಲಿ ಕಾರ್ಯಾಚರಣೆ ನಡೆಯುತ್ತಿರುವಂತೆ ಕೇಂದ್ರ ಸರ್ಕಾರ ಇಂದು ಭಾರತದಲ್ಲಿನ ಬಹುತೇಕ ಖಲಿಸ್ತಾನಿ ಬೆಂಬಲಿಗರ ಟ್ವಿಟರ್ ಖಾತೆಗಳನ್ನು ಬ್ಲಾಕ್ ಮಾಡಿದೆ.

ಖಲಿಸ್ತಾನ್ ಪರ ಸಂಘಟನೆಯಾದ ‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಅಮೃತ್​ಪಾಲ್ ಸಿಂಗ್ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿರುವ ಪಂಜಾಬ್​ ಪೊಲೀಸರ ಕ್ರಮ ಖಂಡಿಸಿ ಖಲಿಸ್ತಾನಿ ಬೆಂಬಲಿಗರು ವಿದೇಶಗಳಲ್ಲಿ ಭಾರತದ ಕಚೇರಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್​ಗಳು ಶೇರ್​ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಟ್ವಿಟರ್ ಖಾತೆಗಳನ್ನು ಬ್ಲಾಕ್ ಮಾಡಲಾಗಿದೆ.

ಕೆನಡಾದ ನ್ಯೂ ಡೆಮಾಕ್ರಟಿಕ್ ಪಕ್ಷದ ಸಂಸದನಾಗಿರುವ ಭಾರತ ಮೂಲದ ಜಗ್ಮೀತ್ ಸಿಂಗ್, ಕೆನಡಾದ ಕವಯಿತ್ರಿ ರೂಪಿ ಕೌರ್, ಸ್ವಯಂಸೇವಾ ಸಂಸ್ಥೆ ಯುನೈಟೆಡ್ ಸಿಖ್ಸ್ ಮತ್ತು ಕೆನಡಾ ಮೂಲದ ಕಾರ್ಯಕರ್ತ ಗುರುದೀಪ್ ಸಿಂಗ್ ಸಹೋಟಾ ಅವರ ಟ್ವಿಟರ್ ಖಾತೆಗಳು ಸೇರಿದಂತೆ ಅನೇಕ ಖಲಿಸ್ತಾನ್‌ ಬೆಂಬಲಿಗರ ಟ್ವಟಿರ್‌ ಖಾತೆಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ.

ಕೆನಡಾ ಸಂಸದ ಜಗ್ಮೀತ್ ಸಿಂಗ್ ಭಾರತ ವಿರೋಧಿ ಹೇಳಿಕೆಗಳಿಗೆ ಹೆಸರುವಾಸಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರತ ವಿರೋಧಿ ಪೋಸ್ಟ್ ಮಾಡುತ್ತಿರುತ್ತಾರೆ.

ವಿದೇಶಗಳಲ್ಲಿ ಖಲಿಸ್ತಾನಿ ಬೆಂಬಲಿಗರ ದಾಂಧಲೆ ವಿಪರೀತಕ್ಕೆ ಹೋಗಿರುವ ಸಮಯದಲ್ಲಿ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top