News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

2024ರೊಳಗೆ ಪ್ರತಿ ಗ್ರಾಮ ಪಂಚಾಯತ್‌ಗೆ ಕ್ರೀಡಾ ಕಿಟ್‌ ನೀಡಲಿದೆ ಯುಪಿ

ಲಕ್ನೋ: ಉತ್ತರ ಪ್ರದೇಶ ಸರ್ಕಾರವು ಮುಂದಿನ ವರ್ಷದೊಳಗೆ ಪ್ರತಿ ಗ್ರಾಮ ಪಂಚಾಯತ್‌ಗೆ ಕ್ರೀಡಾ ಕಿಟ್‌ಗಳನ್ನು ನೀಡಲಿದೆ ಎಂಬುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.

ಕ್ರೀಡಾ ಕಿಟ್ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, 30,000 ಹಳ್ಳಿಗಳಲ್ಲಿ ಆಟದ ಮೈದಾನಗಳನ್ನು ನಿರ್ಮಿಸಲು ಸಮರೋಪಾದಿಯಲ್ಲಿ ಕೆಲಸ ಮಾಡಲಾಗುತ್ತಿದೆ, ಜೊತೆಗೆ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಜಿಮ್‌ಗಳು, ಬ್ಲಾಕ್‌ಗಳಲ್ಲಿ ಮಿನಿ ಕ್ರೀಡಾಂಗಣಗಳು ಮತ್ತು ಜಿಲ್ಲೆಗಳಲ್ಲಿ ಕ್ರೀಡಾಂಗಣಗಳನ್ನು ಸ್ಥಾಪಿಸಲಾಗುತ್ತಿದೆ.  ಗ್ರಾಮಗಳನ್ನು ಸ್ವಚ್ಛ ಮತ್ತು ಸುಂದರವಾಗಿಡಲು ಮತ್ತು ಅವುಗಳನ್ನು ಸೌಹಾರ್ದತೆ ಮತ್ತು ಒಗ್ಗಟ್ಟಿನ ಕೇಂದ್ರಗಳಾಗಿ ಅಭಿವೃದ್ಧಿಪಡಿಸುವ ಉದ್ದೇಶವನ್ನು ಮುನ್ನಡೆಸುವಂತೆ ಯುವಕ ಮಂಗಲ ದಳ ಮತ್ತು ಮಹಿಳಾ ಮಂಗಲ ದಳಗಳಿಗೆ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಯುವಜನತೆ ಮತ್ತು ಮಹಿಳಾ ಮಂಗಳ ದಳವು ಭಾರತದ ಏಳಿಗೆಗೆ ಆಧಾರವಾಗಿದೆ, ಇದು ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾವಲಂಬಿ ಭಾರತದ ಕಲ್ಪನೆಯನ್ನು ಸಾಕಾರಗೊಳಿಸಬಲ್ಲದು ಎಂದು ಹೇಳಿದ ಸಿಎಂ, ಯುವಕರು ಮತ್ತು ಮಹಿಳಾ ಮಂಗಳ ದಳವು ಸಮಾಜದಲ್ಲಿ ತಮ್ಮ ಜವಾಬ್ದಾರಿಯನ್ನು ಅರ್ಥಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ತಮ್ಮ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ವರದಿ ನೀಡುವಂತೆ ಸೂಚಿಸಿದರು.

ತಿಂಗಳಿಗೆ ರೂ 1.5 ಲಕ್ಷ ರೂ ಗೌರವಧನದಲ್ಲಿ ತರಬೇತುದಾರರಾಗಿ ಕೆಲಸ ಪಡೆದ ಆರು ಅಂತಾರಾಷ್ಟ್ರೀಯ ಆಟಗಾರರಿಗೆ ನೇಮಕಾತಿ ಪತ್ರವನ್ನು ಮುಖ್ಯಮಂತ್ರಿ ಈ ವೇಳೆ ಹಸ್ತಾಂತರಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top