News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಲ ಜೀವನ್‌ ಮಿಷನ್‌ ಅಡಿ ತ್ರಿಪುರಾಗೆ 2000 ಕೋಟಿ ರೂ ಬಿಡುಗಡೆ ಮಾಡಿದೆ ಕೇಂದ್ರ

ನವದೆಹಲಿ: ತ್ರಿಪುರಾದ ಮನೆಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಕೇಂದ್ರವು ಜಲ ಜೀವನ್ ಮಿಷನ್ ಅಡಿಯಲ್ಲಿ ರಾಜ್ಯಕ್ಕೆ 2,000 ಕೋಟಿ ರೂಪಾಯಿ ನೀಡಿದೆ ಎಂದು ತ್ರಿಪುರಾದ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಹೇಳಿದ್ದಾರೆ.

ಪೈಪ್ ನೀರು ಯೋಜನೆ ಅನುಷ್ಠಾನಕ್ಕೆ 2,000 ಕೋಟಿ ರೂಪಾಯಿ ಮಂಜೂರು ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಸಹಾ ಧನ್ಯವಾದ ಅರ್ಪಿಸಿದರು.

ಪ್ರಸ್ತುತ, ಈ ಈಶಾನ್ಯ ರಾಜ್ಯದ 56 ಪ್ರತಿಶತ ಕುಟುಂಬಗಳು ಪೈಪ್ ನೀರಿನ ಸೌಲಭ್ಯವನ್ನು ಹೊಂದಿದ್ದು, ರಾಜ್ಯವು ಎಲ್ಲಾ ಮನೆಗಳಿಗೆ ನೀರು ಸರಬರಾಜು ಮಾಡುವ ಯೋಜನೆಯನ್ನು ಹೊಂದಿದೆ.

”ಜಲ್ ಜೀವನ್ ಮಿಷನ್ 2023-24ರ ಅಡಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವಾಲಯವು ತ್ರಿಪುರಾಕ್ಕೆ 2000 ಕೋಟಿ ರೂ.ಗಳನ್ನು ಅನುಮೋದಿಸಿದೆ ಮತ್ತು ಕಳೆದ 3 ವರ್ಷಗಳಲ್ಲಿಒಟ್ಟು 1,930 ಕೋಟಿ ರೂ.ಗಿಂತ ಹೆಚ್ಚಿನ ನಿಧಿಯನ್ನು ಹಂಚಿಕೆಯಾಗಿದೆ ಎಂದು ಹೇಳಲು ಸಂತೋಷವಾಗಿದೆ” ಎಂದು ಅವರು ಹೇಳಿದರು.

”ನಿಧಿಯನ್ನು ಮಂಜೂರು ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್  ಅವರಿಗೆ ನಾನು ಮನಃಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಇದರಿಂದ ಹೆಚ್ಚಿನ ಮನೆಗಳಿಗೆ ಪೈಪ್‌ಲೈನ್‌ನಲ್ಲಿ ಕುಡಿಯುವ ನೀರು ದೊರೆಯುತ್ತದೆ” ಎಂದು ಸಹಾ ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top