News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿ ಬಗ್ಗೆ ಆಕ್ಷೇಪಾರ್ಹ ಪೋಸ್ಟರ್:‌ ದೆಹಲಿಯಲ್ಲಿ 6 ಮಂದಿಯ ಬಂಧನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸೇರಿದಂತೆ ನಗರದಾದ್ಯಂತ ‘ಆಕ್ಷೇಪಾರ್ಹ’ ಪೋಸ್ಟರ್‌ಗಳನ್ನು ಹಾಕಿದ್ದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಆರು ಜನರನ್ನು ಬಂಧಿಸಲಾಗಿದೆ.

ವರದಿಗಳ ಪ್ರಕಾರ, ಕೆಲವು ಪೋಸ್ಟರ್‌ಗಳಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಟೀಕೆಗಳನ್ನು ಮಾಡಲಾಗಿದೆ. “ಮೋದಿ ಹಟಾವೋ ದೇಶ್ ಬಚಾವೋ” ಎಂದು ಘೋಷಣೆ ಬರೆಯಲಾಗಿದೆ. ದೆಹಲಿ ಪೊಲೀಸರು 100 ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಆರು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿ ದೀಪೇಂದ್ರ ಪಾಠಕ್ ತಿಳಿಸಿದ್ದಾರೆ.

ಪ್ರಿಂಟಿಂಗ್ ಪ್ರೆಸ್ ಆಕ್ಟ್ ಮತ್ತು ಆಸ್ತಿ ವಿರೂಪ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ನಗರದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ ಈ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷ ಭಾಗಿಯಾಗಿರುವ ಶಂಕೆ ಇದೆ. ವರದಿಯ ಪ್ರಕಾರ, ವ್ಯಾನ್ ಎಎಪಿ ಕಚೇರಿಯಿಂದ ಹೊರಡುತ್ತಿದ್ದಾಗ ಅದನ್ನು ತಡೆಹಿಡಿದು ಕೆಲವು ಪೋಸ್ಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ತನಿಖೆ ಮುಂದುವರಿದಿದೆ.

ಎಎಪಿ ಈ ಬಗ್ಗೆ ಟ್ವಿಟದ ಮಾಡಿ, “ಮೋದಿ ಜಿ 100 ಎಫ್‌ಐಆರ್‌ಗಳನ್ನು ದಾಖಲಿಸಲು ಈ ಪೋಸ್ಟರ್‌ನಲ್ಲಿ ಆಕ್ಷೇಪಾರ್ಹವಾದದ್ದು ಏನು?” ಎಂದು ಹೇಳುವ ಮೂಲಕ ಕೃತ್ಯವನ್ನು ಸಮರ್ಥಿಸಿಕೊಂಡಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top