ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶಹೀದ್ ದಿವಸ್ ಹಿನ್ನೆಲೆಯಲ್ಲಿ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್ ಮತ್ತು ರಾಜ್ಗುರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರ ತ್ಯಾಗವನ್ನು ಭಾರತ ಸದಾ ಸ್ಮರಿಸುತ್ತದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಇವರು ನಮ್ಮ ಸ್ವಾತಂತ್ರ್ಯ ಹೋರಾಟಕ್ಕೆ ಅಪ್ರತಿಮ ಕೊಡುಗೆ ನೀಡಿದ ಮಹಾನುಭಾವರು ಎಂದು ಬಣ್ಣಿಸಿದ್ದಾರೆ.
ಇಂದು ಶಹೀದ್ ದಿವಸ್ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾನ್ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ನಮನ ಸಲ್ಲಿಸಿದ್ದಾರೆ.
ಅವರ ಶೌರ್ಯ ಮತ್ತು ದೇಶಪ್ರೇಮ ಯುಗಯುಗಾಂತರಗಳಿಗೂ ಸ್ಪೂರ್ತಿಯಾಗಿ ಉಳಿಯುತ್ತದೆ ಎಂದು ಶಾ ಟ್ವೀಟ್ ನಲ್ಲಿ ಹೇಳಿದ್ದಾರೆ.
India will always remember the sacrifice of Bhagat Singh, Sukhdev and Rajguru. These are greats who made an unparalleled contribution to our freedom struggle. pic.twitter.com/SZeSThDxUW
— Narendra Modi (@narendramodi) March 23, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.