ನವದೆಹಲಿ: 2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತಪ್ಪಿತಸ್ಥನಾಗಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗಿದೆ.
“ಕೇರಳದ ವಯನಾಡ್ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರಾದ ಶ್ರೀ ರಾಹುಲ್ ಗಾಂಧಿ ಅವರು ಭಾರತದ ಸಂವಿಧಾನ 1951 ರ ಜನತಾ ಪ್ರಾತಿನಿಧ್ಯ ಕಾಯಿದೆಯ ಸೆಕ್ಷನ್ 8 ರ ಆರ್ಟಿಕಲ್ 102(1)(ಇ) ನ ನಿಬಂಧನೆಗಳ ಪ್ರಕಾರ ಲೋಕಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ” ಎಂದು ಲೋಕಸಭೆಯ ಕಾರ್ಯದರ್ಶಿ ಇಂದು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರನ್ನು ಹೀಯಾಳಿಸುವ ಭರದಲ್ಲಿ ರಾಹುಲ್ ಗಾಂಧಿ ಅವರು ಮೋದಿ ಸರ್ನೇಮ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಾಗಿತ್ತು. ಗುರುವಾರ ಈ ಪ್ರಕರಣದಲ್ಲಿ ಅವರು ದೋಷಿ ಎಂದು ಸೂರತ್ ನ್ಯಾಯಾಲಯ ತೀರ್ಪು ನೀಡಿದೆ.
ಗಾಂಧಿಯವರ ಅಪರಾಧ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿರೋಧಿಸಿ ಶುಕ್ರವಾರ ದೇಶದ ಕೆಲವು ಭಾಗಗಳಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಪಕ್ಷದ ಅಧಿಕಾರಿಗಳು ಈ ತೀರ್ಪನ್ನು ರಾಜಕೀಯ ಪ್ರೇರಿತ ಎಂದು ಬಣ್ಣಿಸಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ದೂಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.