ಬೆಂಗಳೂರು: ಶಿವಮೊಗ್ಗದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯದ ಕರ್ನಾಟಕ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು ಕರ್ನಾಟಕ ಸರ್ಕಾರ ಮತ್ತು ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯ ನಡುವೆ ಇಂದು ಒಡಂಬಡಿಕೆಗೆ ಸಹಿ ಹಾಕಲಾಗಿದೆ.
ವಿಶ್ವ ವಿದ್ಯಾಲಯದ ಉಪಕುಲಪತಿ ಬಿಮಲ್ ಎನ್ ಪಟೇಲ್ ಹಾಗೂ ರಾಜ್ಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು.
ಈ ಮೂಲಕ ದಕ್ಷಿಣ ಭಾರತದಲ್ಲಿ ಕರ್ನಾಟಕ ರಕ್ಷಾ ವಿಶ್ವ ವಿದ್ಯಾಲಯದ ಅಧ್ಯಯನ ಕೇಂದ್ರ ಹೊಂದಿದ ಮೂರನೇ ರಾಜ್ಯವಾಗಿ ಹೊರಹೊಮ್ಮುತ್ತಿದೆ
ಯುವಕರಿಗೆ ಭದ್ರತೆ ಮತ್ತು ಪೊಲೀಸ್ ಸೇವೆಗಳ ಕ್ಷೇತ್ರದಲ್ಲಿ ಅತ್ಯಾಧುನಿಕ ತರಬೇತಿ, ಶಿಕ್ಷಣ, ಸಂಶೋಧನೆ ಇತ್ಯಾದಿ ಚಟುವಟಿಕೆಗಳು ಮತ್ತು ಈ ಕ್ಷೇತ್ರದಲ್ಲಿ ಅಗತ್ಯವಾಗಿ ಬೇಕಾಗಿರುವ “ಮಾನವ ಸಂಪನ್ಮೂಲ” ವನ್ನು ಸೃಜಿಸಲು ವಿಶ್ವವಿದ್ಯಾಲಯದ ಮಹತ್ವದ ಕೊಡುಗೆ ನೀಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.