ಬೆಂಗಳೂರು: ಪರಿಶಿಷ್ಟ ಜಾತಿ ಪಟ್ಟಿಯಲ್ಲಿದ್ದರೂ ಮೀಸಲಾತಿ ಸೌಲಭ್ಯದಿಂದ ವಂಚಿತರಾಗಿದ್ದ ಎಡಗೈ- ಬಲಗೈ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಮಹತ್ವಪೂರ್ಣ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ತೆಗೆದುಕೊಂಡಿದೆ. ಈ ಮೂಲಕ ದಶಕಗಳ ಬೇಡಿಕೆಯನ್ನು ಈಡೇರಿಸಲಾಗಿದೆ.
ಎಡಗೈ ಸಮುದಾಯಗಳಿಗೆ 6.0% ಮೀಸಲಾತಿ ಘೋಷಿಸಲಾಗಿದೆ. ಬಲಗೈ ಸಮುದಾಯಗಳಿಗೆ 5.5% ಮೀಸಲಾತಿ ಘೋಷಿಸಲಾಗಿದೆ. ಭೋವಿ, ಬಂಜಾರ ಸಮುದಾಯಗಳು 4.5% ಮೀಸಲಾತಿ ಪಡೆಯಲಿವೆ. ಅಲೆಮಾರಿ ಸಣ್ಣ ಸಮುದಾಯಗಳು 1.0% ಮೀಸಲಾತಿ ಪಡೆಯಲಿವೆ.
2ಸಿ-ಒಕ್ಕಲಿಗ ಸಮುದಾಯದ ಮೀಸಲಾತಿ ಶೇಕಡ 4 ರಿಂದ 6ಕ್ಕೆ ಏರಿಕೆ ಮಾಡಲಾಗಿದೆ.
2ಡಿ-ವೀರಶೈವ ಲಿಂಗಾಯತ ಸಮುದಾಯದ ಮೀಸಲಾತಿ ಶೇ.5ರಿಂದ 7ಕ್ಕೆ ಏರಿಕೆಯಾಗಿದೆ.
2ಬಿ ಅಡಿ ಮುಸ್ಲಿಮರಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿದ್ದು, ಅವರಿಗೆ ಆರ್ಥಿಕವಾಗಿ ಹಿಂದೂಳಿದ ವರ್ಗದ(EWS) ಅಡಿಯಲ್ಲಿ ಮೀಸಲಾತಿ ನೀಡಲು ನಿರ್ಧರಿಸಲಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರಿಗೆ 7 ರಾಜ್ಯಗಳಲ್ಲಿ ಒಬಿಸಿ ಮೀಸಲಾತಿ ಇಲ್ಲ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಎಸ್ಸಿ ಸಮುದಾಯಕ್ಕೆ ಒಳ ಮೀಸಲಾತಿ ನೀಡಲು ಸಂಪುಟ ನಿರ್ಧಾರ ಕೈಗೊಂಡಿದೆ. ಎಸ್ಸಿ ಮೀಸಲಾತಿಯನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ ಜನಸಂಖ್ಯೆಗೆ ಅನುಗುಣವಾಗಿ ನೀಡಲಾಗಿದೆ ಎಂದರು.
ರಾಜ್ಯದ ಅತ್ಯಂತ ಹಿಂದುಳಿದ ವರ್ಗಗಳಾಗಿರುವ ಪಿಂಜಾರ, ನದಾಫ್, ಚಪ್ಪರ ಬಂದ್, ಒಟಾರಿ ಸೇರಿದಂತೆ ಇತರ 13 ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ 1 ರ ಪಿಂಜಾರ, ನದಾಫ್ ಹಾಗೂ ಇತರ 13 ಜಾತಿಗಳ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ.
1/2 pic.twitter.com/XvVf1vPvGq— CM of Karnataka (@CMofKarnataka) March 24, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.