ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಲೋಕಾರ್ಪಣೆ ಮಾಡಿದರು.
ಈ ವೇಳೆ ಮಾತನಾಡಿದ ಮೋದಿ, ಕರ್ನಾಟಕದ ಸಹೋದರ, ಸಹೋದರಿಯರಿಗೆ ನಮಸ್ಕಾರ ಎಂದು ಕನ್ನಡದಲ್ಲೇ ಹೇಳಿದರು. ಅಲ್ಲದೇ ಚಿಕ್ಕಬಳ್ಳಾಪುರ ಆಧುನಿಕ ಭಾರತಕ್ಕೆ ಒಂದು ಮಾದರಿಯಾಗಿದ್ದು, ಸರ್ ಎಂ.ವಿಶ್ವೇಶ್ವರಯ್ಯ ಅವರು ಹುಟ್ಟಿದ ಪುಣ್ಯ ಭೂಮಿಗೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದರು.
ಸತ್ಯಸಾಯಿ ಆಶ್ರಮದಿಂದ ಶೈಕ್ಷಣಿಕ, ಸಾಮಾಜಿಕ, ವೈದ್ಯಕೀಯ ಸೇವೆ ನಡೆಯುತ್ತಿದೆ. 2014ಕ್ಕಿಂತ ಮೊದಲು 300ಕ್ಕಿಂತ ಕಡಿಮೆ ಮೆಡಿಕಲ್ ಕಾಲೇಜುಗಳಿದ್ದವು ಇಂದು ದೇಶದಲ್ಲಿ 650ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. ಕರ್ನಾಟಕದಲ್ಲೇ ಸುಮಾರು 70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳು ಇವೆ. ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿ ಆಗುತ್ತಿದೆ ಎಂದು ಹೇಳಿದರು.
ಬಡವರ ಅಭಿವೃದ್ಧಿ ಬಿಜೆಪಿಯ ಸರ್ವೋಚ್ಛ ಗುರಿ ಎಂದ ಅವರು, ಆಯುಷ್ಮಾನ್ ಭಾರತ್ ಯೋಜನೆಯಿಂದ ಬಡ ರೋಗಿಗಳಿಗೆ ಅನುಕೂಲವಾಗಿದೆ. ಕರ್ನಾಟಕದ ಲಕ್ಷಾಂತರ ರೋಗಿಗಳಿಗೆ ಯೋಜನೆಯಿಂದ ಅನುಕೂಲವಾಗಿದೆ ಎಂದು ಹೇಳಿದರು.
ಬಿಜೆಪಿ ಸರ್ಕಾರ ದೇಶದ ಅಭಿವೃದ್ದಿಗೆ ನಿರಂತರ ಪ್ರಯತ್ನ ಮಾಡುತ್ತಿದೆ. ಕಡಿಮೆ ಸಮಯದಲ್ಲಿ ದೇಶದ ಅಭಿವೃದ್ಧಿ ಆಗುತ್ತಿದೆ. ಸಾಮಾಜಿಕ ಸಂಘಟನೆಗೂ ಸರ್ಕಾರ ಶ್ರಮಿಸುತ್ತಿದೆ. ದಲಿತ, ಬಡವ ಎಲ್ಲಾ ವರ್ಗದ ಜನರ ಸಶಕ್ತೀಕರಣಕ್ಕೆ ಒತ್ತು ನೀಡಲಾಗುತ್ತಿದೆ. ದೇಶದಲ್ಲಿ ಇತ್ತೀಚಿಗ ಮೆಡಿಕಲ್ ಕಾಲೇಜುಗಳ ಉದ್ಘಾಟನೆಯಾಗುತ್ತಿದೆ. ಕನ್ನಡ ಭಾಷೆ ದೇಶದಲ್ಲಿ ಸಮೃದ್ಧ ಭಾಷೆಯಾಗಿದೆ. ಕನ್ನಡದಲ್ಲೂ ಮೆಡಿಕಲ್ ಶಿಕ್ಷಣ ಇರಬೇಕು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.