ನವದೆಹಲಿ: ದೇಶದಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಸುಧಾರಣೆಗಳ ಅಡಿಯಲ್ಲಿ 19 ಕೋಟಿ 79 ಲಕ್ಷ ಪಡಿತರ ಚೀಟಿಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ಗ್ರಾಹಕ ವ್ಯವಹಾರಗಳ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ಶುಕ್ರವಾರ 24ನೇ ಮಾರ್ಚ್ 2023 ರಂದು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ.
ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ ಸಾಧನಗಳನ್ನು (ಇಪಿಒಎಸ್) ಸ್ಥಾಪಿಸುವ ಮೂಲಕ ನ್ಯಾಯಬೆಲೆ ಅಂಗಡಿಗಳ ಸುಮಾರು 100 ಪ್ರತಿಶತ ಸ್ವಯಂಚಾಲಿತತೆಯನ್ನು ಸಾಧಿಸಲಾಗಿದೆ. ದೇಶಾದ್ಯಂತ ಒಟ್ಟು ಹಂಚಿಕೆಯಾದ ಆಹಾರ ಧಾನ್ಯಗಳ ಸುಮಾರು 95 ಪ್ರತಿಶತವನ್ನು ಈ ಇಪಿಒಎಸ್ ಸಾಧನಗಳ ಮೂಲಕ ವಿತರಿಸಲಾಗುತ್ತಿದೆ ಎಂದು ಅವರು ಹೇಳಿದರು.
27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಉದ್ದೇಶಿತ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಅಕ್ಕಿಯನ್ನು ವಿತರಿಸುತ್ತಿವೆ ಎಂದ ಅವರು, ಉದ್ದೇಶಿತ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ 95 ಲಕ್ಷ ಮೆಟ್ರಿಕ್ ಟನ್ಗೂ ಅಧಿಕ ಅಕ್ಕಿಯನ್ನು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.