ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಬಹು ನಿರೀಕ್ಷಿತ ಕೆ ಆರ್ ಪುರಂ-ವೈಟ್ಫೀಲ್ಡ್ ಮೆಟ್ರೋ ರೈಲು ಸಂಚಾರ ಉದ್ಘಾಟಿಸಿದರು. ಅಲ್ಲದೇ ನಾಲ್ಕು ಕಿ.ಮೀ ವರೆಗೂ ಮೆಟ್ರೋದಲ್ಲಿ ಪ್ರಯಾಣ ಮಾಡಿದರು.
ಮೋದಿ ಸಾಮಾನ್ಯರಂತೆ ಟೋಕನ್ ಪಡೆದು ಮೆಟ್ರೋದಲ್ಲಿ ಪ್ರಯಾಣಿಸುವ ಮೂಲಕ ಮಾದರಿಯಾದರು. ಈ ವೇಳೆ ಅವರು ಮೆಟ್ರೋ ಸಿಬ್ಬಂದಿಗಳು, ಮಕ್ಕಳು, ವಿದ್ಯಾರ್ಥಿಗಳ ಜೊತೆಗೆ ಮಾತುಕತೆ ನಡೆಸಿ ಸಂಭ್ರಮಿಸಿದರು.
13.71 ಕಿ.ಮೀ. ಉದ್ದದ ಕೆ ಆರ್ ಪುರಂ-ವೈಟ್ಫೀಲ್ಡ್ ಮೆಟ್ರೋ ಮಾರ್ಗವನ್ನು 4,500 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದು ದೇಶದ ಎರಡನೇ ಅತಿ ದೂರ ಕ್ರಮಿಸುವ ಮೆಟ್ರೋ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ದೆಹಲಿ ಮೆಟ್ರೋ ಪ್ರಸ್ತುತ 390 ಕಿ.ಮೀ. ಸಂಚಾರ ಮಾರ್ಗ ಹೊಂದಿದ್ದು, ದೇಶದಲ್ಲಿಯೇ ನಂಬರ್ ಒನ್ ಸ್ಥಾನದಲ್ಲಿದೆ.
#WATCH | Karnataka: Prime Minister Narendra Modi inaugurates Whitefield (Kadugodi) to Krishnarajapura line of Bengaluru Metro.
(Source: DD) pic.twitter.com/OANqOoHGyz
— ANI (@ANI) March 25, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.