ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭಾನುವಾರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಸಭೆ ನಡೆಸಿದರು.
ಬೃಹನ್ಮುಂಬೈ ಮುನಿಸಿಪಲ್ ಕಾರ್ಪೊರೇಷನ್ (BMC) ಚುನಾವಣೆಗೂ ಮುನ್ನ ಎರಡು ಪಕ್ಷಗಳ ನಡುವೆ ಮೈತ್ರಿ ನಡೆಯಬಹುದು ಎಂಬ ಊಹಾಪೋಹಕ್ಕೆ ಈ ಸಭೆ ಮತ್ತಷ್ಟು ಪುಷ್ಟಿ ನೀಡಿದೆ. ಎಂಎನ್ಎಸ್, ಬಿಜೆಪಿ ಮತ್ತು ಶಿಂಧೆ ನೇತೃತ್ವದ ಶಿವಸೇನೆ ನಡುವಿನ ಸಂಭವನೀಯ ಮೈತ್ರಿಯ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಸಭೆ ನಡೆದಿರುವುದು ಮಹತ್ವ ಪಡೆದುಕೊಂಡಿದೆ.
ರಾಜ್ ಠಾಕ್ರೆ ಅವರು ತಮ್ಮ ಸೋದರ ಸಂಬಂಧಿ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಉತ್ತಮ ಸಂಬಂಧ ಹೊಂದಿಲ್ಲ, ಹೀಗಾಗಿ ಠಾಕ್ರೆ ಉದ್ಧವ್ ವಿರೋಧಿ ಪಕ್ಷಗಳನ್ನು ಸೇರುವ ಸಾಧ್ಯತೆ ದಟ್ಟವಾಗಿದೆ.
ಮಾರ್ಚ್ 22 ರಂದು ಮುಂಬೈನ ಶಿವಾಜಿ ಪಾರ್ಕ್ನಲ್ಲಿ ನಡೆದ ಮೆಗಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ರಾಜ್ ಠಾಕ್ರೆ, ಶಿವಸೇನೆಯ ವಿಭಜನೆಗೆ ಉದ್ಧವ್ ಠಾಕ್ರೆಯನ್ನು ದೂಷಿಸಿದ್ದರು. ಅಲ್ಲದೇ ಉದ್ಧವ್ ಕಾರಣದಿಂದಾಗಿ ಅನೇಕ ಪಕ್ಷದ ನಾಯಕರು ತೊರೆದಿದ್ದಾರೆ ಎಂದು ಆರೋಪಿಸಿದ್ದರು.
”ಮಹಾರಾಷ್ಟ್ರದಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ ಉತ್ತಮ ದಿಕ್ಕಿನಲ್ಲಿ ಸಾಗುತ್ತಿಲ್ಲ. ಶಿವಸೇನೆ ಚಿಹ್ನೆಗಾಗಿ ನಡೆಯುವ ಸಮರ ನೋಡಿದಾಗ ನೋವಾಗುತ್ತದೆ. ನಾನು ಶಿವಸೇನೆ ತೊರೆದಾಗ, ಕೆಲವರು (ಉದ್ಧವ್) ನನ್ನ ಬಗ್ಗೆ ವದಂತಿಗಳನ್ನು ಹರಡಿದರು, ಆದರೆ ಈಗ ಆ ವ್ಯಕ್ತಿಗೆ ಸ್ವತಃ ಬಾಳಾಸಾಹೇಬ್ ಠಾಕ್ರೆ ಸ್ಥಾಪಿಸಿದ ಪಕ್ಷವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ” ಎಂದು ರಾಜ್ ಠಾಕ್ರೆ ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.