ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದಿನಿಂದ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭೇಟಿಯಾಗಲಿದ್ದಾರೆ.
ಇಂದು ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಗೌರವ ಸಲ್ಲಿಸಲು ಕೋಲ್ಕತ್ತಾದ ನೇತಾಜಿ ಭವನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಗುರುದೇವ್ ರವೀಂದ್ರನಾಥ ಟ್ಯಾಗೋರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಜೋರಾಸಂಕೋ ಠಾಕುರ್ಬರಿ – ರವೀಂದ್ರನಾಥ ಟ್ಯಾಗೋರ್ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಂಜೆ, ಕೋಲ್ಕತ್ತಾದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಅವರ ಗೌರವಾರ್ಥವಾಗಿ ಆಯೋಜಿಸಲಾಗುವ ನಾಗರಿಕ ಸ್ವಾಗತ ಸಮಾರಂಭದಲ್ಲಿ ರಾಷ್ಟ್ರಪತಿಗಳು ಭಾಗವಹಿಸಲಿದ್ದಾರೆ. ನಾಳೆ ರಾಷ್ಟ್ರಪತಿಗಳು ಬೇಲೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ಕೋಲ್ಕತ್ತಾದಲ್ಲಿ ಯುಕೋ ಬ್ಯಾಂಕ್ನ 80 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಶಾಂತಿನಿಕೇತನಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ವಿಶ್ವಭಾರತಿಯ ವಾರ್ಷಿಕ ಘಟಿಕೋತ್ಸವವನ್ನು ನಡೆಸಿಕೊಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.