ಮುಂಬೈ: ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ರಾಹುಲ್ ಗಾಂಧಿಯವರ “ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಕ್ಷಮೆಯಾಚಿಸುವುದಿಲ್ಲ” ಎಂಬ ಹೇಳಿಕೆ ನೀಡಿದ್ದರು. ಇದರಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್ ಜೊತೆ ಮೈತ್ರಿಯಲ್ಲಿದ್ದ ಉದ್ಧವ್ ಠಾಕ್ರೆ ಅವರು ಕಟು ಎಚ್ಚರಿಕೆಯನ್ನು ನೀಡಿದ್ದಾರೆ.
“ನಮ್ಮ ದೇವರನ್ನು ಅವಮಾನಿಸುವುದನ್ನು ನಿಲ್ಲಸದೇ ಇದ್ದರೆ ಮಹಾರಾಷ್ಟ್ರ ವಿರೋಧ ಪಕ್ಷದ ಮೈತ್ರಿಯಲ್ಲಿ ಬಿರುಕು ಮೂಡಲಿದೆ” ಎಂದು ಎಚ್ಚರಿಸಿದ್ದಾರೆ.
“ಈ ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ನಾವು ಒಟ್ಟಾಗಿದ್ದೇವೆ ಎಂದು ನಾನು ರಾಹುಲ್ ಗಾಂಧಿಗೆ ಹೇಳಲು ಬಯಸುತ್ತೇನೆ, ಆದರೆ ಬಿರುಕುಗಳನ್ನು ಸೃಷ್ಟಿಸುವ ಯಾವುದೇ ಹೇಳಿಕೆಗಳನ್ನು ನೀಡಬೇಡಿ. ಅವರು (ಬಿಜೆಪಿ) ನಿಮ್ಮನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ನಾವು ಈ ಅವಕಾಶವನ್ನು ತಪ್ಪಿಸಿಕೊಂಡರೆ, ನಮ್ಮ ದೇಶವು ಖಂಡಿತವಾಗಿಯೂ ನಿರಂಕುಶಾಧಿಕಾರದತ್ತ ಸಾಗುತ್ತದೆ” ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.
ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ಅವರ ಶಿವಸೇನೆ, ಎನ್ಸಿಪಿ ಜೊತೆಗೆ 2019 ರಲ್ಲಿ ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರವನ್ನು ರಚಿಸಿದಾಗಿನಿಂದ ಮೈತ್ರಿಯಲ್ಲಿದೆ. ಶಿವಸೇನೆಯಲ್ಲಿನ ಬಂಡಾಯದ ನಂತರ ಉದ್ಧವ್ ಠಾಕ್ರೆ ಅವರ ಸರ್ಕಾರ ಉರುಳಿ ಏಕನಾಥ್ ಶಿಂಧೆ ಸರ್ಕಾರ ಆಡಳಿತಕ್ಕೆ ಬಂದ ನಂತರವೂ ಕಾಂಗ್ರೆಸ್ ಮತ್ತು ಉದ್ಧವ್ ಬಣ ಮೈತ್ರಿಯಲ್ಲಿಯೇ ಇದೆ.
ಕಳೆದ ವರ್ಷ ಭಾರತ್ ಜೋಡೋ ಯಾತ್ರೆಯಲ್ಲಿ ಹಿಂದೂ ವಿಚಾರವಾದಿ ವಿನಾಯಕ್ “ವೀರ್” ಸಾವರ್ಕರ್ ಅವರನ್ನು ರಾಹುಲ್ ಗಾಂಧಿ ಟೀಕಿಸಿದ್ದು ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ಪಕ್ಷದ ನಡುವೆ ಬಿರುಕು ಮೂಡಿಸಿತ್ತು. ನಂತರ ಭಿನ್ನಾಭಿಪ್ರಾಯಗಳು ಸುಗಮಗೊಂಡಿದ್ದವು, ಠಾಕ್ರೆ ಅವರ ಆಪ್ತ ಸಂಜಯ್ ರಾವುತ್ ಅವರು ರಾಹುಲ್ ಗಾಂಧಿಯವರ ಭಾರತ್ ಜೋಡೋದಲ್ಲಿ ಸೇರಿದ್ದರು.
ಇದೀಗ ಮತ್ತೆ ಸಾವರ್ಕರ್ ಅವರನ್ನು ಅವಮಾನಿಸಿದ ರಾಹುಲ್ ವಿರುದ್ಧ ಉದ್ಧವ್ ಕಿಡಿ ಕಾರಿದ್ದಾರೆ. ಸಾವರ್ಕರ್ ಅವರನ್ನು ತಮ್ಮ ಆರಾಧ್ಯ ಎಂದು ಕರೆದಿದ್ದಾರೆ ಮತ್ತು ಅವರಿಗೆ ಕಾಂಗ್ರೆಸ್ ಅವಮಾನಿಸುವುದನ್ನು ನಿಲ್ಲಿಸಬೇಕು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.