ನವದೆಹಲಿ: ಪಾನ್ ಕಾರ್ಡ್-ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ನೀಡಿದ್ದ ಗಡುವನ್ನು ಆದಾಯ ತೆರಿಗೆ ಇಲಾಖೆಯು ಜೂನ್ 30 ರವರೆಗೆ ವಿಸ್ತರಿಸಿದೆ. ಈ ಮೂಲಕ ಲಕ್ಷಾಂತರ ಪಾನ್ ಕಾರ್ಡ್ ಹೊಂದಿರುವವರಿಗೆ ನಿರಾಳತೆ ದೊರೆತಿದೆ.
ಈ ಹಿಂದೆ ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಇದೀಗ ದಿನಾಂಕ ವಿಸ್ತರಣೆಯಾಗಿದೆ. 1,000 ದಂಡ ನೀಡಿ ಜೂನ್ 30 ರವರೆಗೆ ಲಿಂಕ್ ಮಾಡಬಹುದಾಗಿದೆ.
“ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯವನ್ನು ಒದಗಿಸುವ ಸಲುವಾಗಿ, ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು ಜೂನ್ 30, 2023 ಕ್ಕೆ ವಿಸ್ತರಿಸಲಾಗಿದೆ” ಎಂದು ಆದಾಯ ತೆರಿಗೆ ಇಲಾಖೆಯ ಸುತ್ತೋಲೆ ತಿಳಿಸಿದೆ.
ಬ್ಯಾಂಕಿಂಗ್ ವ್ಯವಹಾರಗಳಿಗೆ ಪಾನ್ ಕಾರ್ಡ್ ಅತಿ ಅವಶ್ಯಕವಾಗಿದ್ದು, ಗಡುವಿನ ಒಳಗೆ ಜೋಡಣೆ ಕಾರ್ಯ ಮಾಡಿದರೆ ಒಳಿತು. ಇಲ್ಲವಾದರೆ ಸಮಸ್ಯೆ ಎದುರಿಸಬೇಕಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.