ನವದೆಹಲಿ: ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಅಹಮದಾಬಾದ್ ಮತ್ತು ಇಂಗ್ಲೆಂಡ್ನ ಗ್ಯಾಟ್ವಿಕ್ ನಡುವೆ ನೇರ ವಿಮಾನಯಾನವನ್ನು ಉದ್ಘಾಟಿಸಿದರು. ಅಹಮದಾಬಾದ್ ಮತ್ತು ಗ್ಯಾಟ್ವಿಕ್ ನಡುವಿನ ತಡೆರಹಿತ ವಿಮಾನವನ್ನು ಏರ್ ಇಂಡಿಯಾ ನಿರ್ವಹಿಸುತ್ತದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಿಂಧಿಯಾ, ಈ ಹೊಸ ವಾಯು ಸಂಪರ್ಕವು ವ್ಯಾಪಾರ ಮತ್ತು ವಾಣಿಜ್ಯಕ್ಕೆ ಹೊಸ ಅವಕಾಶಗಳನ್ನು ತರುತ್ತದೆ ಮತ್ತು ಯುಕೆಯಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ ಎಂದು ಹೇಳಿದರು.
ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಸ್ತುತ 50 ಲಕ್ಷ ದೇಶೀಯ ಮತ್ತು 25 ಲಕ್ಷ ಅಂತರಾಷ್ಟ್ರೀಯ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಸಿಂಧಿಯಾ ಹೇಳಿದರು.
ಅಹಮದಾಬಾದ್ನ ಪ್ರಯಾಣಿಕರ ಸಾಮರ್ಥ್ಯವನ್ನು 1 ಕೋಟಿ 60 ಲಕ್ಷಕ್ಕೆ ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ . 2013-14ರಲ್ಲಿ ಅಹಮದಾಬಾದ್ ಕೇವಲ 20 ಸ್ಥಳಗಳಿಗೆ ಮಾತ್ರ ಸಂಪರ್ಕ ಕಲ್ಪಿಸಿತ್ತು. ಕಳೆದ ಒಂಬತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಂಪರ್ಕವು 57 ಸ್ಥಳಗಳಿಗೆ ಏರಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.