ಬೆಂಗಳೂರು: ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ.10 ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ. 13 ಕ್ಕೆ ಘೋಷಣೆಯಾಗಲಿದೆ.
ನಾಮಪತ್ರ ಸಲ್ಲಿಕೆ ಆರಂಭ ಏಪ್ರಿಲ್ 20ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 24 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನಾಂಕವಾಗಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ತ್ರಿಕಾಗೋಷ್ಠಿಯನ್ನು ನಡೆಸಿ ದಿನಾಂಕ ಘೋಷಣೆ ಮಾಡಿದ್ದಾರೆ.
ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.
ಮೇ.24ಕ್ಕೆ 15ನೇ ವಿಧಾನಸಭೆಯ ಅವಧಿ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಅದಕ್ಕಿಂತ ಮೊದಲು ಸರ್ಕಾರ ರಚನೆಯಾಗಬೇಕಿದೆ.
ಕರ್ನಾಟಕದಲ್ಲಿ ಒಟ್ಟು 5 ಕೋಟಿ 21 ಲಕ್ಷ ಮತದಾರರಿದ್ದಾರೆ. ಇದರಲ್ಲಿ 2 ಕೋಟಿ 31 ಲಕ್ಷ ಮತದಾರರು ಮಹಿಳೆಯರು. 4,696 ತೃತೀಯ ಲಿಂಗಿ ಮತದಾರರು ಇದ್ದಾರೆ.
ಒಟ್ಟು 224 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
58,282 ಮತಗಟ್ಟೆಗಳನ್ನು ರಾಜ್ಯಾದ್ಯಂತ ಸ್ಥಾಪಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ 34,219 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ಒಂದೊಂದು ಮತಗಟ್ಟೆಗೆ 883 ಮತದಾರರು. ಸೂಕ್ಷ್ಮ ಮತಗಟ್ಟೆಗಳು 12,000 ಇರಲಿವೆ ಎಂದು ಚುನಾವಣಾ ಆಯುಕ್ತರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.