ನವದೆಹಲಿ: ಕೇಂದ್ರ ಸರ್ಕಾರವು ನವ ಭಾರತ ಸಾಕ್ಷರತಾ ಕಾರ್ಯಕ್ರಮ ಎಂಬ ಹೊಸ ಕೇಂದ್ರ ಪ್ರಾಯೋಜಿತ ಯೋಜನೆಯನ್ನು ಪ್ರಾರಂಭಿಸಿದೆ. ಇದು 2022-23 ರಿಂದ 2026-27 ರ ಆರ್ಥಿಕ ವರ್ಷದಲ್ಲಿ ಅನುಷ್ಠಾನವಾಗಲಿದ್ದು, ಇದಕ್ಕೆ 1000 ಕೋಟಿ ರೂಪಾಯಿ ವಿನಿಯೋಗಿಸಲಾಗುತ್ತಿದೆ.
ಈ ಯೋಜನೆಯು 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಐದು ಕೋಟಿ ಅನಕ್ಷರಸ್ಥರನ್ನು ಗುರಿಯಾಗಿಸಿ ಅವರಿಗೆ ಅಕ್ಷರ ಜ್ಞಾನ ನೀಡುವ ಗುರಿಯನ್ನು ಹೊಂದಿದೆ. ಶಿಕ್ಷಣ ಖಾತೆ ರಾಜ್ಯ ಸಚಿವೆ ಅನ್ನಪೂರ್ಣ ದೇವಿ ಬುಧವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ.
ಈ ಯೋಜನೆಯಡಿ ಫಲಾನುಭವಿಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸರ್ವೇಯರ್ಗಳು ಮೊಬೈಲ್ ಅಪ್ಲಿಕೇಶನ್ನಲ್ಲಿ ಮನೆ ಮನೆಗೆ ಸಮೀಕ್ಷೆಯ ಮೂಲಕ ಗುರುತಿಸುತ್ತಾರೆ. ಅನಕ್ಷರಸ್ಥರು ಮೊಬೈಲ್ ಆ್ಯಪ್ ಮೂಲಕ ಯಾವುದೇ ಸ್ಥಳದಿಂದ ನೇರ ನೋಂದಣಿ ಮೂಲಕ ಯೋಜನೆಯ ಪ್ರಯೋಜನವನ್ನು ಪಡೆಯಬಹುದು ಎಂದು ಸಚಿವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.